ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳ ಸುಳಿವು ದೊರಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಿಗ್ಗೆ 10:30ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬೆಳವಣಿಗೆಯ ನಡುವೆಯೇ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ಜನತೆಗೆ ಭಾವುಕ ಸಂದೇಶ ರವಾನಿಸಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ತಮ್ಮ ಟ್ವೀಟ್ನಲ್ಲಿ ಸಿದ್ದರಾಮಯ್ಯ, “ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.ಇನ್ನೂ ಮುಂದುವರಿದು, “ಚುನಾವಣಾ ಪೂರ್ವದಲ್ಲಿ ಜನತೆಗೆ ನೀಡಿದ ಪ್ರತಿಯೊಂದು ಭರವಸೆಯನ್ನೂ ಈಡೇರಿಸುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮ್ಮದಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಪ್ರತೀ ಮನೆಗೂ ತಲುಪಿಸಿದ್ದೇವೆ” ಎಂದು ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆ ಕುರಿತು ಉಲ್ಲೇಖಿಸಿರುವ ಸಿಎಂ, “ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆ ಕೋಟ್ಯಂತರ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸಿದೆ. ಈ ಯೋಜನೆಯಡಿ ಇದುವರೆಗೆ 18,897 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 4.26 ಕೋಟಿ ಪಡಿತರದಾರರು ಇದರ ಪ್ರಯೋಜನ ಪಡೆಯುತ್ತಿದ್ದಾರೆ” ಎಂದು ವಿವರಿಸಿದ್ದಾರೆ.ಸಿದ್ದರಾಮಯ್ಯ ಅವರ ಈ ಸಂದೇಶ ರಾಜಕೀಯವಾಗಿ ಮಹತ್ವ ಪಡೆದಿದ್ದು, ರಾಜೀನಾಮೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಗಳು ತೀವ್ರಗೊಂಡಿರುವ ನಡುವೆ, ನಾಳೆಯ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ನೀಡುವ ಸಾಧ್ಯಸಾಧ್ಯತೆ.
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5… pic.twitter.com/uVi9UzyQvP
— Siddaramaiah (@siddaramaiah) May 27, 2026











