ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ನೀತಿಯ ವಿಚಾರವೂ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಬದಲಾವಣೆಯ ಶಿಕ್ಷಣ ನೀತಿಗೆ ಹಲವರ ವಿರೋಧ ಮತ್ತು ಹಲವರು ಪರವಾಗಿಯೂ ಇದ್ದರು. ಇದೀಗ ಶಿಕ್ಷಣ ನೀತಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಹೊಸ ವಿಚಾರ ಹಂಚಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ… pic.twitter.com/LnQe96P6gN
— CM of Karnataka (@CMofKarnataka) October 11, 2023
‘ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.
ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿತ್ತು. ಅಲ್ಲದೆ ರಾಜ್ಯದಲ್ಲಿ ಕೆಲವು ತಿಂಗಳ ಹಿಂದೆ ನಡೆದ 2023ರ ವಿಧಾನಸಭೆ ಚುನಾವಣೆ ವೇಳೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರ್ನಾಟಕ ಶಿಕ್ಷಣ ನೀತಿ ಬದಲಾಗುವುದು ಪಕ್ಕಾ ಎಂದು ಆಶ್ವಾಸನೆ ನೀಡಲಾಗಿತ್ತು. ಅದರ ಭಾಗವಾಗಿ ಇದೇ ಶೈಕ್ಷಣಿಕ ವರ್ಷದಿಂದ ಶಿಕ್ಷಣ ನೀತಿಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು.