Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಣ ನೀತಿಯ ವಿಚಾರಕ್ಕೆ ಹೊಸ ಅಪ್ಡೇಟ್ ನೀಡಿದ ಸಿಎಂ ಸಿದ್ದರಾಮಯ್ಯ

---Advertisement---

 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ನೀತಿಯ ವಿಚಾರವೂ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಬದಲಾವಣೆಯ ಶಿಕ್ಷಣ ನೀತಿಗೆ ಹಲವರ ವಿರೋಧ ಮತ್ತು ಹಲವರು ಪರವಾಗಿಯೂ ಇದ್ದರು. ಇದೀಗ ಶಿಕ್ಷಣ ನೀತಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಹೊಸ ವಿಚಾರ ಹಂಚಿಕೊಂಡಿದ್ದಾರೆ.

 

‘ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿತ್ತು. ಅಲ್ಲದೆ ರಾಜ್ಯದಲ್ಲಿ ಕೆಲವು ತಿಂಗಳ ಹಿಂದೆ ನಡೆದ 2023ರ ವಿಧಾನಸಭೆ ಚುನಾವಣೆ ವೇಳೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕರ್ನಾಟಕ ಶಿಕ್ಷಣ ನೀತಿ ಬದಲಾಗುವುದು ಪಕ್ಕಾ ಎಂದು ಆಶ್ವಾಸನೆ ನೀಡಲಾಗಿತ್ತು. ಅದರ ಭಾಗವಾಗಿ ಇದೇ ಶೈಕ್ಷಣಿಕ ವರ್ಷದಿಂದ ಶಿಕ್ಷಣ ನೀತಿಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment