Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುರಿಗಾಹಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

---Advertisement---

ಬೆಂಗಳೂರು: ಕುರಿಗಾಹಿಗಳ ಬದುಕು ಸುಲಭವಲ್ಲ. ಸಾಕಷ್ಟು ಕಷ್ಟಪಡುತ್ತಾರೆ. ಅವರಿಗೆ ಆದಂತ ಜೀವನ ಸೆಕ್ಯುರಿಟಿಗಳು ಇಲ್ಲ. ಎಲ್ಲೆಲ್ಲೋ ಕುರಿಗಳನ್ನು ಮೇಯಿಸಲು ಹೋದಾಗ ಜೀವ ರಕ್ಷಣೆಗೆ ಏನು ಇಲ್ಲ. ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ, ಆಸ್ಪತ್ರೆಗಳಲ್ಲಿ ಔಷಧಿ, ಚಿಕಿತ್ಸೆ ದೊರೆಯಬೇಕು. ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸುವುದಿಲ್ಲ, ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅವಕಾಶವಿಲ್ಲ ಎಂಬಿತ್ಯಾದಿ ಸಮಸ್ಯೆಗಳನ್ನು ಕುರಿಗಾಹಿಗಳು ಸಿಎಂ ಗಮನಕ್ಕೆ ತಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಪಾಸಿಟಿವ್ ರೆಸ್ಪಾನ್ಸ್ ನೀಡಿದ್ದಾರೆ. ಮುಂದಿನ ಬಜೆಟ್ ನಲ್ಲಿ ಕುರಿಗಾಹಿಗಳಿಗಾಗಿ ಹಲವು ಯೋಜನೆ ಘೋಷಿಸುವುದಾಗಿ ಹೇಳಿದ್ದಾರೆ.

 

2024-25 ನೇ ಸಾಲಿನಲ್ಲಿ ಕುರಿಗಾಹಿ ಸಮುದಾಯಗಳಿಗೆ ಘೋಷಿಸಿರುವ ಕಾರ್ಯಕ್ರಮಗಳ ಜಾರಿಗೆ ಆದೇಶ ಹೊರಡಿಸಲು ಸಿಎಂ ಸೂಚಿಸಿದ್ದಾರೆ. ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ಒದಗಿಸಲಾಗುವುದು. ಗುರುತಿನ ಚೀಟಿ ಇದ್ದರೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ಸಹಾಯವಾಗುತ್ತದೆ. ಕುರಿಗಳ ಕಳ್ಳತನ ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸೂಚಿಸಲಾಗುವುದು. ಕುರಿ ಕಳ್ಳತನ ಪ್ರಕರಣಗಳ ಕುರಿತು ಯಾವುದೇ ಠಾಣೆಗೆ ದೂರು ಬಂದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಸಂಚಾರಿ ಕುರಿಗಾಹಿಗಳಿಗೆ, ಕುರಿಗಳಿಗೆ ಅಗತ್ಯ ಭದ್ರತೆ ಒದಗಿಸಲು ಸೂಚಿಸಲಾಗುವುದು.

ಅನುಗ್ರಹ ಕಾರ್ಯಕ್ರಮದಲ್ಲಿ ಬಾಕಿ ಇರುವ ಪರಿಹಾರಗಳ ಬಗ್ಗೆ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ಕುರಿಗಳ ಅಭಿವೃದ್ಧಿ, ಕುರಿಗಾಹಿಗಳ ಭದ್ರತೆ, ಕುರಿ ವ್ಯಾಪಾರಕ್ಕೆ ನೆರವು, ಮಾರುಕಟ್ಟೆ ವಿಸ್ತರಣೆಗೆ ನೆರವು. ಗೋಮಾಳಗಳನ್ನು ಯಾರಿಗೂ ಪರಬಾರೆ ಮಾಡದಂತೆ ರಕ್ಷಿಸಲು, ಒತ್ತುವರಿ ಮಾಡಿಕೊಂಡರೆ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದಿದ್ದಾರೆ.

 

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು. ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲೂ ಅಗತ್ಯ ಸೂಚನೆ ನೀಡಲಾಗುವುದು ಎಂದು ಕುರಿಗಾಹಿಗಳ ಸಮಸ್ಯೆಗಳಿಗೆ ಪರಿಹಾರ ತಿಳಿಸುವುದಾಗಿ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...