Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ ನವರಿಗೂ ಗಣಿಗಾರಿಕೆಗೂ ಏನೋ ನಂಟಿದೆ : ಅಹಿಂಸಾ ಚೇತನ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಸೆ.17 : ಸಿದ್ದರಾಮಯ್ಯ ಅವರು ಶಪಥ ಮಾಡಿ ಬಳ್ಳಾರಿಗೆ ಪಾದಯಾತ್ರೆ ಮಾಡಿ ದೇಶದಲ್ಲಿ ಸಂಚಲನ ಸೃಷ್ಟಿಸಿ ಬಳಿಕ ರಾಜ್ಯದ ಸಿಎಂ ಆದರು. ಆದರೆ ಮುಖ್ಯಮಂತ್ರಿಯಾದ ಬಳಿಕ ಗಣಿ ಧಣಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದೆ ಮೌನವಹಿಸಿದ್ದು ವಿಷಾದನೀಯ ಎಂದು ನಟ ಅಹಿಂಸಾ ಚೇತನ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಗಣಿಬಾಧಿತ ಹೋರಾಟ ಸಮಿತಿಯಿಂದ ಆಯೋಜಿಸಿದ್ದ ಗಣಿಬಾಧಿತ ಪ್ರದೇಶಗಳ ಜನರ ಸಂಕಷ್ಟಗಳು, ಪರಿಸರ ಅಸಮತೋಲನ ಮತ್ತು ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಯಲ್ಲಿ ಗಣಿಗಳ ಮಹತ್ವ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಗಣಿಗಾರಿಕೆಗೆ ಏನೋ ಒಂದು ನಂಟಿದೆ. ಸಿಎಂ ಸಿದ್ದರಾಮಯ್ಯ ಸಿಂಗಲ್ ವಿಂಡೋ ಎಂದು ಘೋಷಣೆ ಮಾಡಿ ಈಗ ಗಣಿಗಾರಿಕೆ ಮಾಡುವವರಿಗೆ ಸಹಾಯ ಮಾಡಿದ್ದಾರೆ. ಆದರೆ ಸರ್ಕಾರ ಇದನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಪದೇ ಪದೇ ತಪ್ಪು ಮಾಡಿ ಗಣಿಗಾರಿಕೆ ಮಾಡುತ್ತಿರುವವರಿಗೆ ಲೈಸೆನ್ಸ್ ಕೊಡಬಾರದು. ಪರಿಸರಕ್ಕೆ ಗಣಿಗಾರಿಕೆ ಅನ್ನೋದು ಅತ್ಯಂತ ಅಪಾಯಕಾರಿಯಾಗಿದೆ. ಕೊಡಗು, ಸಂಡೂರು, ಚಿತ್ರದುರ್ಗದಲ್ಲಿ ಗಣಿಗಾರಿಕೆಯಿಂದ ಹಲವು ಸಮಸ್ಯೆಗಳು ಆಗುತ್ತಿವೆ. ಗಣಿಗಾರಿಕೆ ಮಾಡುವವರಿಗೆ ಸರ್ಕಾರ ಸಹಾಯ ಮಾಡದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ ಬೇಕು. ಮುಂದಿನ ದಿನಗಳಲ್ಲಿ ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಇನ್ನು ಸಿದ್ದರಾಮಯ್ಯ ಅವರು ಶಪಥ ಮಾಡಿ ಬಳ್ಳಾರಿಗೆ ಪಾದಯಾತ್ರೆ ಮಾಡಿ ದೇಶದಲ್ಲಿ ಸಂಚಲನ ಸೃಷ್ಟಿಸಿ ಬಳಿಕ ರಾಜ್ಯದ ಸಿಎಂ ಆದರೂ. ಆದರೆ ಮುಖ್ಯಮಂತ್ರಿಯಾದ ಬಳಿಕ ಗಣಿ ಧಣಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದೆ ಮೌನವಹಿಸಿದ್ದು ವಿಷಾದನೀಯ ಎಂದ ಅವರು, ಚಿತ್ರದುರ್ಗದ ಕಾವಾಡಿಗರಹಟ್ಟಿ ದುರ್ಘಟನೆ ಬಗ್ಗೆ ಪ್ರಸ್ತಾಪ ಮಾಡಿ ಕಾವಡಿಗರಹಟ್ಟಿಯಲ್ಲಿ ಕಲುಷಿತ ನೀರು ಸಮಸ್ಯೆಯಿಂದಾಗಿ ನೂರಾರು ಮಂದಿ ಆಸ್ಪತ್ರೆ ಸೇರಿದ್ದರು, 6 ಮಂದಿ ಮೃತಪಟ್ಟಿದ್ದರು. ಅದು ಒಂದು ರೀತಿ ಪರಿಸರ ಸ್ವಚ್ಛತೆ ಇಲ್ಲದ ಕಾರಣದಿಂದ ಘಟನೆ ಸಂಭವಿಸಿತು ಎಂದು ನಟ ಅಹಿಂಸಾ ಚೇತನ್ ಹೇಳಿದರು.

ಸಂವಾದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗಣಿಬಾಧಿತ ಹೋರಾಟ ಸಮಿತಿಯ ಉಪಾಧ್ಯಕ್ಷ ಹಾಗೂ ಸದಸ್ಯರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now