Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ ಅವರಿಗೆ ‘ಪತ್ರಿಕಾ ವಿತರಕರ ಬಂಧು’ ಬಿರುದು

---Advertisement---

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಆಡಳಿತ ವೈಖರಿಗೆ, ಪತ್ರಕರ್ತರೊಂದಿಗೆ ಅವರಿಗಿರುವ ನಂಟಿನ ಬಂಧಕ್ಕೆ ಇಂದು ಪತ್ರಕರ್ತ ಮಿತ್ರರು ಸೇರಿ ಅವರಿಗೊಂದು ಸುಂದರವಾದ ಬಿರುದನ್ನು ನೀಡಿದ್ದಾರೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ “ಪತ್ರಿಕಾ ವಿತರಕರ ಬಂಧು” ಎನ್ನುವ ಬಿರುದು ನೀಡಿ ಸನ್ಮಾನಿಸಿದ್ದಾರೆ.

ಚಿತ್ರದುರ್ಗದಲ್ಲಿ ಇದೇ ಸೆಪ್ಟೆಂಬರ್ 08 ರಂದು ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನ ನಡೆದಿತ್ತು. ಸಮ್ಮೇಳನದಲ್ಲಿಯೇ ಈ ಬಿರುದನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಬೇಕಾಗಿತ್ತು. ಸಮ್ಮೇಳನಕ್ಕೆ ಬರಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ ಕಾರಣಾಂತರದಿಂದ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳು ಗೈರಾಗಿದ್ದರು. ಹೀಗಾಗಿ ಇಂದು ಕಾವೇರಿ ನಿವಾಸಕ್ಕೇ ಬಂದ ಪತ್ರಕರ್ತರ ಸಂಘದವರು, ಕಾವೇರಿ ನಿವಾಸದಲ್ಲಿಯೇ ಬಿರುದನ್ನು ನೀಡಿ, ಗೌರವಿಸಿದರು.

ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಶಂಬುಲಿಂಗ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಕಾಂಗ್ರೆಸ್ ಮುಖಂಡರಾದ ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲ್ ಅವರು ಉಪಸ್ಥಿತರಿದ್ದು ಪತ್ರಿಕಾ ವಿತರಕ ಸಮುದಾಯಕ್ಕೆ ಸರ್ಕರ ನೀಡಿರುವ ನೆರವನ್ನು ಸ್ಮರಿಸಿ ಧನ್ಯವಾದ ಸಲ್ಲಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...