Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಮ ಮಂದಿರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ : ರಜೆ ಘೋಷಿಸದ ಬಗ್ಗೆ ಸ್ಪಷ್ಟನೆ

---Advertisement---

ಬೆಂಗಳೂರು: ಅಯೋಧ್ಯೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ರಾಮಮಂದಿರ ಉದ್ಘಾಟನೆ ಮಾಡಿದರೆ ಇತ್ತ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಗಳ್ಳಿ ಹೋಬಳಿಯಲ್ಲಿರುವ ಹಿರಂಡಹಳ್ಳಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ‌. ಶ್ರೀರಾಮ ಟೆಂಪಲ್ ಟ್ರಸ್ಟ್ ನವರು ಈ ರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ.

ಈ ದೇವಾಲಯದಲ್ಲಿ ಸೀತಾ-ರಾಮ, ಲಕ್ಷ್ಮಣ 33 ಅಡಿ ಆಂಜನೇಯ ದೇವಸ್ಥಾನವೂ ಇದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ದೇವಾಲಯದಲ್ಲಿ ವಿಶೇಷ ಪೂಜೆ – ಪುನಸ್ಕಾರಗಳು ನಡೆದಿವೆ. ಇಂದು ಸಿಎಂ ಸಿದ್ದರಾಮಯ್ಯ ಅವರು ರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರಿಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹದ ಜೊತೆಗೆ ಬಿಲ್ಕು ಬಾಣ ನೀಡಲಾಯಿತು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದು ರಾಜಕೀಯ ಕಾರ್ಯಕ್ರಮ ಅಲ್ಲ. ಇಲ್ಲಿರುವ ರಾಮನಲ್ಲಿಯೇ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒಂದೇ ಅಲ್ವಾ. ಗಾಂಧೀಜಿ ಕೂಡ ರಾಮಭಕ್ತ. ನಾನು ನಾಸ್ತಿಕನಲ್ಲ, ನಾನು ಆಸ್ತಿಕನೆ.‌ ಶ್ರೀರಾಮಚಂದ್ರನನ್ನು ಇಡೀ ದೇಶ ಪ್ರೀತಿಸುತ್ತದೆ. 143 ಕೋಟಿ ಜನ ಪ್ರೀತಿಸುತ್ತಾರೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲಿ ರಾಮನ ದೇವಸ್ಥಾನವಿದೆ. ನಮ್ಮೂರಿನಲ್ಲೂ ರಾಮನ ದೇವಸ್ಥಾನವನ್ನು ಕಟ್ಟಿಸಿದ್ದೀನಿ. ನಾವೂ ರಾಮ, ಆಂಜನೇಯನ ಭಕ್ತರು. ಯಾವತ್ತೂ ಕೂಡ ದೇವರ ಅಸ್ತಿತ್ವವನ್ನು ವಿರೋಧ ಮಾಡಿಲ್ಲ ಎಂದಿದ್ದಾರೆ.

ಇದೆ ವೇಳೆ ಶಾಲಾ-ಕಾಲೇಜಿನ ರಜೆ ಬಗ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆ ನೀಡಿದ್ಯಾ..? ಕಾರ್ಯಕ್ರಮ ನಡೆಯುತ್ತಿರುವುದು ಅಯೋಧ್ಯೆಯಲ್ಲಿ. ಆದರೆ ಕೇರಳ, ದೆಹಲಿ, ಪಶ್ಚಿಮ ಬಂಗಾಳದಲ್ಲಿ ರಜೆ ಇದ್ಯಾ..? ಎಂದು ಪ್ರಶ್ನೆ ಮಾಡುವ ಮೂಲಕ ಯಾಕೆ ರಜೆ ನೀಡಿಲ್ಲ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment