ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ಸಿಎಂ ಸಿದ್ದರಾಮಯ್ಯ ಅವರು ಬ್ಯಾಕ್ ಟು ಬ್ಯಾಕ್ ಅಧಿಕಾರಿಗಳ ಸಭೆ ನಡೆಸಿ, ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ. ಇದೀಗ ಪೊಲೀಸ್ ಅಧಿಕಾರಿಗಳ ಸಭೆ ನಡಸಿ, ಕಾನೂನು ಸುವ್ಯವಸ್ಥೆ ಬಗ್ಗೆ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದೆ. ಕಾನೂನು ಎಲ್ಲರಿಗೂ ಒಂದೇ. ಕಾನೂನನ್ನು ಪಾಲನೆ ಮಾಡಬೇಕು. ಎಷ್ಟೇ ದೊಡ್ಡವರಾದರೂ ಕಾನೂನು ಎಲ್ಲರಿಗೂ ಒಂದೇ. ರೌಡಿಸಂ ಚಟುವಟಿಕೆ ಮೇಲೆ ನಿಗಾ ಇಡಬೇಕು ಎಂದು ಸೂಚನೆ ನೀಡಿದ್ದಾರೆ.
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಹಿಂದಿನ ಸರ್ಕಾರದಲ್ಲಿ ಕಾರ್ಯ ವೈಖರಿ ಸರಿ ಇರಲಿಲ್ಲ. ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಹಲವರು ಪ್ರಾಣ ಕಳೆದುಕೊಂಡರು, ಮನೆಯಿಲ್ಲದೆ ನಿರ್ಗತಿಕರಾದರು. ಕೆಲ ಸಂದರ್ಭದಲ್ಲಿ ಹಲವರು ಸರಿಯಾಗಿ ಸ್ಪಂದಿಸಲಿಲ್ಲ. ನಮ್ಮ ಸರ್ಕಾರಕ್ಕೆ ಉತ್ತಮ ಹೆಸರು ತಂದುಕೊಡುವುದು ನಿಮ್ಮ ಕೈಯ್ಯಲ್ಲಿಯೇ ಇದೆ. ನೀವೂ ಸರಿಯಾಗಿ ಕೆಲಸ ಮಾಡಿದರೆ ನಮ್ಮ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ ಎಂದಿದ್ದಾರೆ.