Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಕಾನೂನು ಸಂಕಟ : ಯಾವ ಕೇಸಲ್ಲಿ ಗೊತ್ತಾ..?

---Advertisement---

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ನಾಲ್ಕನೇ ಎಸಿಜೆಸಿಎಂ ನ್ಯಾಯಾಲಯವೂ ನೋಟೀಸ್ ನೀಡಿದೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘ ಹಾಗೂ ಭಜರಂಗದಳದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿಯೇ ವಾಗ್ದಾಳಿ ನಡೆಸಿದ್ದರು. ಆ ಸಂಬಂಧ ಇದೀಗ ಕೋರ್ಟ್ ನೋಟೀಸ್ ನೀಡಿದೆ.

ಸಿಎಂ ಸಿದ್ದರಾಮಯ್ಯ ಅವರು ಜೂನ್ 26ರ ಒಳಗೆ ಕೋರ್ಟ್ ಗೆ ಉತ್ತರಿಸಬೇಕಿದೆ. ಅತಿ ಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಭಜರಂಗದಳ ಹಾಗೂ ಆರ್ಎಸ್ಎಸ್ ನಿಂದ ಎಂದು ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿಯೇ ಹೇಳಿದ್ದರು. ಈ ಹೇಳಿಕೆಯನ್ನು ಖಂಡಿಸಿದ್ದ, ಬಿಜೆಪಿ ನಾಯಕರು ಸದನದಲ್ಲಿಯೇ ಆಕ್ರೋಶ ಹೊರ ಹಾಕಿದ್ದರು. ಈ ಸಂಬಂಧ ಇದೀಗ ಸಿದ್ದರಾಮಯ್ಯ ಅವರಿಗೆ ನೋಟೀಸ್ ಜಾರಿಯಾಗಿದೆ.

ಜನರ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಕಿರಣ್ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಆದ್ರೆ ಕೋರ್ಟ್ ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಬಿ ಎನ್ ಎಸ್ ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯಗೆ ನೋಟಿಒಸ್ ನೀಡಿದ್ದು, ಜೂನ್ 26ರ ಒಳಗೆ ಕೋರ್ಟ್ ನೋಟೀಸ್ ಗೆ ಉತ್ತರಿಸಬೇಕಿದೆ. ಸದನದೊಳಗೆ RSS ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಹೇಳಿದ ಮಾತಿಗೆ ಅಂದಿನ ದಿನವೇ ಆಕ್ರೋಶ ಭುಗಿಲೆದ್ದಿತ್ತು. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಆ ಸಂಬಂಧ ದೂರು ದಾಖಲಾದ ಹಿನ್ನೆಲೆ ನೋಟೀಸ್ ನೀಡಲಾಗಿದೆ. ಸಿದ್ದರಾಮಯ್ಯ ಅವರು ಅದಕ್ಕೆ ಯಾವ ಉತ್ತರ ಕೋಡ್ತಾರೆ ಎಂಬುದನ್ನ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment