ಬೆಂಗಳೂರು: ಹಲವು ಜ್ಯೋತಿಷ್ಯರು ಕೂಡ ಈಗಾಗಲೇ ರಾಜ್ಯ ರಾಜಕಾರಣ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡಮಟ್ಟದ ಬದಲಾವಣೆಯಾಗಲಿದೆ ಎಂಬುದನ್ನು ಹೇಳಿದ್ದಾರೆ. ನಿನ್ನೆಯಷ್ಟೇ ಪ್ರಧಾನಿ ಮೋದಿಯವರು ತಮ್ಮ 74ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಕಿಂಗ್ ಭವಿಷ್ಯವನ್ನು ನುಡಿದಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಹುದ್ದೆಯಲ್ಲಿ ಪೂರ್ಣಾವಧಿ ಮುಗಿಸುವುದು ಅನುಮಾನ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆಗೆ ಇರುವುದಿಲ್ಲ ಎನಿಸುತ್ತಿದೆ ಎಂದಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಬಗ್ಗೆ ಮಾತನಾಡಿ, ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿಯನ್ನು ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ ಆ ಸಚಿವನ ವಿರುದ್ದ ಕ್ರಮ ತೆಗೆದುಕೊಂಡಿಲ್ಲ. ಕಾಟಚಾರಕ್ಕೆ ಕೇಸು ದಾಖಲಿಸಿ, ಕೈ ಚೆಲ್ಲಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕವಾಡ್ ಮತ್ತೆ ಬೆದರಿಕೆ ಹಾಕಿದ್ದಾರೆ. ರಾಹುಲ್ ಗಾಂಧಿಯನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ರಾಜಕೀಯವಾಗಿ ಮುಗಿಸುವುದರ ಜೊತೆಗೆ ಪ್ರಾಣ ಭಯದ ಷಡ್ಯಂತ್ರ ಆತಂಕಕಾರಿಯಾದದ್ದಾಗಿದೆ.
ರಾಹುಲ್ ಗಾಂಧಿಯವರಿಗೆ ಜೀವ ಬೆದರಿಕೆ ಹಾಕಿರುವವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಕೂಡಲೇ ಬಂಧಿಸಬೇಕು. ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದವರು ರಾಹುಲ್ ಗಾಂಧಿ ಅವರು ಇದಕ್ಕೆಲ್ಲ ಹೆದರುವವರಲ್ಲ. ಈ ರೀತಿಯ ಜೀವ ಬೆದರಿಕೆಗಳ ಮೂಲಕ ಬಿಜೆಪಿಯು ಕಾರ್ಯಕರ್ತರನ್ನ ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.