Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೋದಿ ಭೇಟಿ ಬೆನ್ನಲ್ಲೇ ಖರ್ಗೆ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಸಂಪುಟದ ಬಗ್ಗೆ ಚರ್ಚಿಸಿದರಾ..?

---Advertisement---

ದೆಹಲಿ: ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಪ್ರವಾಸದಲ್ಲಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ಒಂದಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅದರಲ್ಲೂ ರಾಜ್ಯ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟದ ಪುನರ್ ರಚನೆ ವಿಚಾರಕ್ಕೆ ಒಂದಷ್ಟು ಶಾಸಕರು ಕಾಯ್ತಾ ಇದ್ದಾರೆ. ಸಚಿವ ಸ್ಥಾನದ ಆಕಾಂಕ್ಷೆಯಲ್ಲಿದ್ದಾರೆ. ಆ ವಿಚಾರವನ್ನೇ ಖರ್ಗೆ ಅವರ ಬಳಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಅವರ ಸೂಚನೆಯ ಮೇರೆ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಕಾಂಗ್ರೆಸ್ ಹೈಕಮ್ಯಾಂಡ್ ಸಂಪುಟ ಪುನರ ರಚನೆಗೆ ಸೂಚಿಸಿತ್ತು. ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣವಾಗಲಿ ಎಂದು ನಾನೇ ಹೇಳಿದ್ದೆ. ನವಂಬರ್ 20 ಕ್ಕೆ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣವಾಗುತ್ತಿದೆ.  ಹಾಗಾಗಿ ಈಗ ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಮೂಲಕ ರಾಜ್ಯದ ಕ್ಯಾಬಿನೆಟ್ ಪುನರ್ ರಚನೆಯಾಗುವುದನ್ನು ಸಿಎಂ ಸಿದ್ದರಾಮಯ್ಯ ಅವರೇ ಖಚಿತಪಡಿಸಿದ್ದಾರೆ.

ಈ ಮೂಲಕ ಸಚಿವ ಸಂಪುಟದ ಆಕಾಂಕ್ಷಿಗಳಿಗೆ ಆಸೆ ಮತ್ತೆ ಗರಿಗೆದರಿದಂತೆ ಆಗಿದೆ. ಹಲವರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯು ಇದೆ. ಇನ್ನು ಹಲವರು ಸಂಪುಟಕ್ಕೆ ಎಂಟ್ರಿಯಾಗುವ ಮೂಲಕ ತಮ್ಮ ಸಚಿವ ಸ್ಥಾನದ ಆಸೆಯನ್ನ ಈಡೇರಿಸಿಕೊಳ್ಳಲಿದ್ದಾರೆ. ಯಾವಾಗ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂಬುದು ಮಾತ್ರ ಇನ್ನು ಸ್ಪಷ್ಟವಾಗಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now