Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೋವಿ ನಿಗಮದ ಅಧ್ಯಕ್ಷರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

---Advertisement---

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಯೋಜನೆಗಳಡಿ ಸವಲತ್ತು ನೀಡುವುದಕ್ಕೆ ಫಲಾನುಭವಿಗಳಿಂದಲೇ ನಿಗಮದ ಅಧ್ಯಕ್ಷರೇ ಶೇಕಡ 60ರಷ್ಟು ಲಂಚ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಭೂ ಒಡೆತನದ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಹಣ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ಕಮಿಷನ್ ಗೆ ಬೇಡಿಕೆ ಇಟ್ಟಿದ್ದಾರೆ. ಅವರನ್ನ ಮೊದಲು ಹುದ್ದೆಯಿಂದ ವಜಾ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.

 

ಇದೀಗ ಮೂಲಗಳಿಂದ ಬಂದ ಮಾಹಿತಿ ಪ್ರಕಾರ, ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರಿಗೆ ರಾಜೀನಾಮೆ ನೀಡಲು ಸೂಚನೆ ನೀಡಿದ್ದಾರಂತೆ. ಈ ಮೂಲಕ ರವಿಕುಮಾರ್ ಶೀಘ್ರದಲ್ಲಿಯೇ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಲಂಚದ‌ ಆರೋಪ ಬಯಲಾಗುತ್ತಿದ್ದಂತೆ‌ ಸಿಎಂ ಕಡೆಯಿಂದ ಈ ಸೂಚನೆ ನೀಡಿದ್ದಾರಂತೆ.

ಭೋವಿ ನಿಗಮದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಆಕ್ರೋಶ ಹೊರ ಹಾಕಿದೆ. 60% @INCKarnataka ಸರ್ಕಾರದ ಕಮಿಷನ್ ದಂಧೆ ಮತ್ತೊಮ್ಮೆ ಸಾಬೀತಾಗಿದೆ. ಭೋವಿ ನಿಗಮದಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ‌ ಅಧ್ಯಕ್ಷ ರವಿಕುಮಾರ್ 5 ಲಕ್ಷ ಕಮಿಷನ್ ಪಡೆಯುತ್ತಿದ್ದಾನೆ. ರಾಜ್ಯ ಸರ್ಕಾರ ಕೂಡಲೇ ಭ್ರಷ್ಟ ಅಧ್ಯಕ್ಷನನ್ನು ವಜಾ ಮಾಡಿ, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಬೇಕು‌‌ ಎಂದು @JanataDal_S ಪಕ್ಷವು ಆಗ್ರಹಿಸುತ್ತದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ ನಡೆಸಿದ್ದ ಭ್ರಷ್ಟ ಸರ್ಕಾರ, ಬಳಿಕ SCSP/ TSP ನಿಧಿಯಲ್ಲಿನ ಸಾವಿರಾರು ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ದ್ರೋಹ ಬಗೆದಿದ್ದ @INCKarnataka ಮತ್ತೊಮ್ಮೆ ದಲಿತರ ಬೆನ್ನಿಗೆ ಚೂರಿ ಹಾಕಿದೆ. ದಲಿತ ವಿರೋಧಿ @siddaramaiah ಸರ್ಕಾರದ ದುರಾಡಳಿತ ಮಿತಿಮೀರಿದೆ ಎಂದು ಟ್ವೀಟ್ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment