Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೌಜನ್ಯ ಕೇಸ್ ಮರುತನಿಖೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

---Advertisement---

 

ಬೆಂಗಳೂರು: ಕಳೆದ ಹತ್ತು ವರ್ಷಗಳ ಹಿಂದೆ‌ ನಡೆದ ಸೌಜನ್ಯ ಕೇಸ್ ಪ್ರಕರಣ ಇನ್ನು ಇತ್ಯರ್ಥಗೊಂಡಿಲ್ಲ. ಇತ್ತಿಚೆಗಂತು ಸೌಜನ್ಯ ಕೇಸ್ ಗೆ ನ್ಯಾಯ ಬೇಕೆಂದು ಉಡುಪಿಯ ಬೀದಿ ಬೀದಯಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ನ್ಯಾಯಕ್ಕಾಗಿ ಒತ್ತಡ ಕೇಳಿ ಬಂದಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮರುತನಿಖೆ ಬಗ್ಗೆ ಮಾತನಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, ಸೌಜನ್ಯ ಕೇಸ್ ಸಂಬಂಧ, ಮರುತನಿಖೆ ನಡೆಸಲು ಕೇಂದ್ರ ಪತ್ರ ಬೃಯಲು ರಾಜ್ಯ ಸರ್ಕಾರ ಸಿದ್ಧವಿದೆ. ಆದ್ರೆ ಅದಕ್ಕೂ ಮುನ್ನ ಅಔಜನ್ಯ ತಂದೆ ತಾಯಿ ಮರುತನಿಖೆಗೆ ಆಗ್ರಹಿಸಿ, ಕೇಂದ್ರಕ್ಕೆ ಪತ್ರ ಬರೆಯಬೇಕಿದೆ. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಕೇಂದ್ರಕ್ಕೆ ಪತ್ರ ಬರೆಯಲಿದೆ ಎಂದಿದ್ದಾರೆ.

ಪ್ರಕರಣ ಕುರಿತಂತೆ ಹಾಗೂ ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ತರುವ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರೊಂದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಇನ್ನು ಧರ್ಮಸ್ಥಳದಲ್ಲಿ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ದಳ ರಚಿಸುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮಂಡ್ಯದಲ್ಲಿ ಪ್ರತಿಭಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment