Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಕೈ ಎತ್ತಿ ನಾವೂ ಗಟ್ಟಿ ಎಂದ ಸಿಎಂ ಸಿದ್ದರಾಮಯ್ಯ..!

---Advertisement---

 

ಸಿಎಂ ಬದಲಾವಣೆ, ಸೆಪ್ಟೆಂಬರ್ ಕ್ರಾಂತಿ ಹೀಗೆ ಹಲವು ಬೆಳವಣಿಗೆಯ ನಡುವೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಯಾವತ್ತಿಗೂ ನಾವಿಬ್ಬರು ಒಂದೇ ಎಂಬುದನ್ನ ತೋರಿಸಿದ್ದಾರೆ. ಇಂದು ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವುದಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲರೂ ಮೈಸೂರಿನಲ್ಲಿ ಸೇರಿದ್ದರು. ಈ ವೇಳೆ ಪಕ್ಷದ ಒಗ್ಗಟ್ಟನ್ನು ಪ್ರದರ್ಶನ ಮಾಡಿದ್ದಾರೆ.

ಐದು ವರ್ಷ ನಮ್ಮ ಸರ್ಕಾರ ಬಂಡೆ ಥರ ಗಟ್ಟಿಯಾಗಿರುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಮೇಲಕ್ಕೆತ್ತಿ ಪ್ರದರ್ಶನ ಮಾಡಿದರು. ನಾವೂ ಗಟ್ಟಿ, ನಾವೂ ಒಗ್ಗಟ್ಟಾಗಿ ಇರ್ತೀವಿ ಎಂದರು. ಅದರಲ್ಲೂ ಸಚಿವ ಕೆ ಎನ್ ರಾಜಣ್ಣ ಅವರು ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಮಾತಾಡಿದಾಗಿನಿಂದ ಕೆಲ ಕಾಂಗ್ರೆಸ್ ನಾಯಕರು ಹಲವು ಹೇಳಿಕೆಗಳನ್ನು ನೀಡುತ್ತಾ ಇದ್ದರು. ಬಿಜೆಪಿ ನಾಯಕರಂತು ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡ್ತಾರೆ ಅಂತೆಲ್ಲಾ ಹೇಳಿದ್ದರು. ಇದೀಗ ಅವರಿಗೆಲ್ಲ ಸಿಎಂ ಸಿದ್ದರಾಮಯ್ಯ ತಿರಗೇಟು ನೀಡಿದ್ದಾರೆ. ದಸರಾ ವೇಳೆಗೆ ಸಿಎಂ ಬದಲಾವಣೆ ಎಂಬ ಆರ್ ಅಶೋಕ್ ಮಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಬಿಜೆಪಿ ಪಂಚಾಂಗ ಬಿಡಿ ನಿಮಗೆ ಏನು ಅನ್ನಿಸುತ್ತೆ ಹೇಳಿ.‌ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದಿದ್ದಾರೆ.

ಈ ಒಗ್ಗಟ್ಟು ಪ್ರದರ್ಶನದ ಬಗ್ಗೆ ವಿರೋಧ ಪಕ್ಷದ ‌ನಾಯಕರು ವ್ಯಂಗ್ಯವಾಡಿದ್ದಾರೆ. ಬಂಡೆ ಪುಡಿ ಪುಡಿ ಆಗುತ್ತೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬಿಜೆಪಿಯವರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment