ಸುದ್ದಿಒನ್,ಬೆಂಗಳೂರು,ಮೇ.27: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕುರಿತಾದ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಹೊಸ ಪೋಸ್ಟ್ವೊಂದು ಭಾರಿ ಕುತೂಹಲ ಮೂಡಿಸಿದೆ. ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಟ್ವಿಟರ್ ನಲ್ಲಿ, ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.

ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.
ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ.
ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5… pic.twitter.com/uVi9UzyQvP
— Siddaramaiah (@siddaramaiah) May 27, 2026











