ಸುದ್ದಿಒನ್,ಚಿತ್ರದುರ್ಗ,ಮೇ.23: ಸಿಎಂ ಸಿದ್ದರಾಮಯ್ಯ ಅವರು ಮೇ 24ರ ನಾಳೆ ಚಿತ್ರದುರ್ಗ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಕುರಿತು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಅವರು ಅಧಿಕೃತ ಪ್ರವಾಸದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ನಾಳೆ ಮಧ್ಯಾಹ್ನ 12:00 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ (VT-BST) ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.ಮಧ್ಯಾಹ್ನ 1:00 ಗಂಟೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ‘ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ’ಯ ಕ್ರೀಡಾಂಗಣದ ಹೆಲಿಪ್ಯಾಡ್-1 ಕ್ಕೆ ಬಂದು ತಲುಪಲಿದ್ದಾರೆ.

ಚಳ್ಳಕೆರೆಯ ಶ್ರೀ ಅನಂತನಾಥ ಜೈನ ಭವನದಲ್ಲಿ ಆಯೋಜಿಸಲಾಗಿರುವ ಮಾನ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ಕಾರ್ಯಕ್ರಮ ಮುಗಿದ ಬಳಿಕ ಚಳ್ಳಕೆರೆಯ ಕ್ರೀಡಾಂಗಣ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಮರಳಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ: ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಮರಳಿ ತಲುಪಲಿದ್ದಾರೆ.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು, ಪೊಲೀಸ್ ಆಯುಕ್ತರು ಹಾಗೂ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ಬಂದೋಬಸ್ತ್, ಸಾರಿಗೆ, ಸುರಕ್ಷತೆ ಹಾಗೂ ಶಿಷ್ಟಾಚಾರದ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಜೊತೆಗೆ, ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕ್-ಆಫ್‌ಗೆ ಅಗತ್ಯವಿರುವ ಅನುಮತಿ, ಹೆಲಿಪ್ಯಾಡ್‌ನ ಅಕ್ಷಾಂಶ-ರೇಖಾಂಶಗಳ ಮಾಹಿತಿ ಮತ್ತು ಪೈಲಟ್ ಹಾಗೂ ತಾಂತ್ರಿಕ ಸಿಬ್ಬಂದಿಗೆ ವಸತಿ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















