Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು..!

---Advertisement---

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲಿದ್ದಾರೆ ಎನ್ನಲಾಗಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಅಧಿವೇಶನದಲ್ಲಿ ಭಾಗಿಯಾಗದೆ ವಿಶ್ರಾಂತಿ ಪಡೆದಿದ್ದಾರೆ. ಸರ್ಕ್ಯೂಟ್ ಹೌಸ್ ನಲ್ಲಿಯೇ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇಂದು ಸಂಜೆಯವರೆಗೂ ಯಾವುದೇ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿಲ್ಲ. ವಿಶ್ರಾಂತಿ ಪಡೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ಹೊರಗಡೆ ಎಲ್ಲಿಯೂ ಬಂದಿಲ್ಲದ ಕಾರಣ ಶಾಸಕರು, ಸಚಿವರು ಸರ್ಕ್ಯೂಟ್ ಹೌಸ್ ಗೆ ಹೋಗಿ, ಸಿಎಂ ಅವರನ್ನು ಭೇಟಿಯಾಗಿದ್ದಾರೆ. ಅದರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಚಿವ ಭೈರತಿ ಸುರೇಶ್ ಹಾಗೂ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ರಮೇಶ್ ಜಾರಕಿಹೊಳು ಭೇಟಿಯಾಗಿದ್ದೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಯಾಕಂದ್ರೆ ಬಿಜೆಪಿಯ ರೆಬೆಲ್ ಟೀಂನಲ್ಲಿ ಗುರುತಿಸಿಕೊಂಡವರು ರಮೇಶ್ ಜಾರಕಿಹೊಳಿ. ಇದೀಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಶಾಕ್ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಳಿಕ  ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಆರೋಗ್ಯ ವಿಚಾರಣೆಗೆ ಬಂದಿದ್ದೇನೆ ಅಷ್ಟೇ. ರಾಜಕೀಯ, ಅಭಿವೃದ್ಧಿ ಸೇರಿ ಯಾವುದೇ ಚರ್ಚೆ ಆಗಿಲ್ಲ. ಅವರಿಗೆ ಏನ್ ದೈರ್ಯ ಹೇಳುವುದು .  ನಮಗೆ ಧೈರ್ಯ ಹೇಳುವ ಹಾಗೇ ಇದ್ದಾರೆ ಎಂದು ರಮೇಶ್  ಜಾರಕಿಹೊಳಿ ಹೇಳಿದ್ದಾರೆ.

ಇನ್ನು ನಗರಾಭಿವೃದ್ಧಿ ಖಾತೆ ಸಚಿವ ಭೈರತಿ ಸುರೇಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಅವರ ಆರೋಗ್ಯದ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಆರೋಗ್ಯ ಚೆನ್ನಾಗಿದೆ.  ಅವರ ಜೊತೆಗೆ ಊಟ ಮಾಡಿಕೊಂಡು ಬಂದಿರುವೆ . ನಾಳೆ ಸದನದಲ್ಲಿ ಸಿಎಂ ಉತ್ತರ ಕೊಡಬೇಕಿದೆ.  ಹಾಗಾಗಿ ಮಾಹಿತಿ ನೋಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...