ರಾಜ್ಯದ ರೈತರ ಬಂಧನಕ್ಕೆ ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

 

ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ.

 

ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ.

 

ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಕರ್ನಾಟಕ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದಿದ್ದಾರೆ.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

20 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

57 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago