ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಈ ಬಾರಿ ತೊಗರಿ ಬೇಳೆ ಬೆಳೆದ ರೈತರು ಬಹಳಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಬೆಳೆದಿದ್ದ ಸುಮಾರು ಎರಡು ಲಕ್ಷ ಹೆಕ್ಟೇರ್ ನಷ್ಟು ತೊಗರಿ ಬೇಳೆ ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕೂತಿದ್ದಾರೆ. ನಾಶವಾದ ಬೆಳೆಗೆ ಪರಿಹಾರ ನೀಡಬೇಕೆಂದು ರೈತರು ಕೂಡ ಒತ್ತಾಯ ಮಾಡುತ್ತಿದ್ದಾರೆ. ಇಂದು ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯ ಬಳಿಕ ಪರಿಹಾರ ನೀಡುವ ಬಗ್ಗೆ ತೀರ್ಮಾನ ಮಾಡಲಿದ್ದಾರೆ.
ಕೃಷಿ ಇಲಾಖೆ ಹಾಗೂ ಆರ್ಥಿಕ ಇಲಾಖೆ ಹಾಗೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಬೆಳೆ ನಷ್ಟದ ಬಗ್ಗೆ ಚರ್ಚೆ ನಡೆಸಲಾಗುವುದು. ಬಳಿಕ ರೈತರ ಬೆಳೆ ನಷ್ಟಕ್ಕೆ ಪರಿಹಾರ ನೀಡಲಾಗುತ್ತದೆ ಎಂದಿದ್ದಾರೆ.
ಸಾಲ ಸೋಲ ಮಾಡಿ ರೈತರು ಬೆಳೆ ಬೆಳೆಯುತ್ತಾರೆ. ಆದರೆ ಕೆಲವೊಂದು ಕಾರಣದಿಂದ ಇನ್ನೇನು ಕೈಗೆ ಬರಬೇಕೆಂದಿದ್ದ ಬೆಳೆ ಕೈಸೇರದೆ ಹೋದಾಗ ಅದರ ನಷ್ಟ ರೈತರ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಇಂಥ ಸಂದರ್ಭದಲ್ಲಿಯೇ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.