Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಟ್ವೀಟ್​​ಗೆ ಟ್ವೀಟ್ ಮೂಲಕವೇ ತಿರುಗೇಟು ಕೊಟ್ಟ ಸಿಎಂ

Facebook
Twitter
Telegram
WhatsApp

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲೀ ನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ?. ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು

ಈ ಮೂಲಕ ಸುದೀರ್ಘ ರಾಜಕೀಯ ಜೀವನದಲ್ಲಿ ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದವರು. ಆದರೆ, ಈಗ ಮಾತ್ರ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ‌.

ಸಿದ್ದರಾಮಯ್ಯ ಟ್ವೀಟ್​​ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ.ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು ಎಂಬುದು ನನ್ನ ಭಾವನೆ. ನನ್ನ ತಂದೆ ರಾಷ್ಟ್ರೀಯವಾದಿ. ಅದನ್ನು ನಾನು ಪಾಲಿಸುತ್ತೇನೆ. ಆರ್​​ಎಸ್​​​ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!