ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲೀ ನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ?. ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು
ಈ ಮೂಲಕ ಸುದೀರ್ಘ ರಾಜಕೀಯ ಜೀವನದಲ್ಲಿ ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದವರು. ಆದರೆ, ಈಗ ಮಾತ್ರ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ.ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು ಎಂಬುದು ನನ್ನ ಭಾವನೆ. ನನ್ನ ತಂದೆ ರಾಷ್ಟ್ರೀಯವಾದಿ. ಅದನ್ನು ನಾನು ಪಾಲಿಸುತ್ತೇನೆ. ಆರ್ಎಸ್ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…