ಚಿತ್ರದುರ್ಗ: ಮುಂಗಾರು ಮತ್ತು ಹಿಂಗಾರು ಮಳೆ ರಾಜ್ಯದಲ್ಲಿ ಹೆಚ್ಚಾಗಿ ಸುರಿದಿದೆ. ಎಷ್ಟೋ ವರ್ಷಗಳಿಂದ ಖಾಲಿ ಉಳಿದಿದ್ದಂತ ಜಲಾಶಯಗಳು ಕೂಡ ಭರ್ತಿಯಾಗಿವೆ. ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯ ಕೂಡ ಭರ್ತಿಯಾಗಿದೆ. ಸುಮಾರು 89 ವರ್ಷಗಳಿಂದಾನು ಈ ಜಲಾಶಯ ಖಾಲಿ ಉಳಿದಿತ್ತು. ಇದೀಗ ಭರ್ತಿಯಾಗಿದೆ.
ಈ ಹಿನ್ನೆಲೆ ನವೆಂಬರ್ 22ರಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜಲಾಶಯಕ್ಕೆ ಬಾಗಿನ ಬಿಡುವ ಕಾರ್ಯಕ್ರಮ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಹಲವು ಸಚಿವರುಗಳು ಕೂಡ ಭಾಗಿಯಾಗಲಿದ್ದಾರೆ.
ಭದ್ರಾದಿಂದ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿಸುವ ಈ ಹಿಂದೆ ರೈತ ಸಂಘದಿಂದ 543 ದಿನ ಧರಣಿ ಸತ್ಯಾಗ್ರಹ ನಡೆಸಲಾಯಿತು. ಅಂದಿನ ನೀರಾವರಿ ಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿ ಭದ್ರಾ ದಿಂದ ವಿವಿ ಸಾಗರಕ್ಕೆ 5 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಚಾಲನೆ ನೀಡಿದರು. ಹಿರಿಯೂರು ರೈತರ ಹೋರಾಟ ನಮ್ಮ ಸರ್ಕಾರದ ಇಚ್ಛಾಶಕ್ತಿಯಿಂದ ಜಲಾಶಯ ಕೋಡಿ ಬಿದ್ದಿದೆ. ಕಳೆದ ಒಂದು ತಿಂಗಳ ಹಿಂದೆ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಮುಂದುಡಲಾಯಿತು. ಜಿಲ್ಲೆಯ ಶಾಸಕರು, ಜಿಲ್ಲಾಧ್ಯಕ್ಷರ ಸೇರಿದಂತೆ ಸಿಎಂ ಬಳಿ ಮಾತಾಡಿದಾಗ ಇದೆ ತಿಂಗಳ 22 ರಂದು ದಿನಾಂಕ ನಿಗದಿ ಪಡಿಸಿದ್ದಾರೆ ಎಂದು ಶಾಸಕಿ ಪೂರ್ಣಿಮಾ ತಿಳಿಸಿದ್ದಾರೆ.