Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ಓಡಿಬಂದ ಸಿದ್ದರಾಮಯ್ಯ

---Advertisement---

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಸಿಯುನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯನ್ನು ಮುಂದುವರೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಬಂದಿದ್ದು, ಪಾರ್ವತಿ ಅವರ ಆರೋಗ್ಯದ ಬಗ್ಗೆ ವಿಚಾತಣೆ ನಡೆಸಿದ್ದಾರೆ.

ಪಾರ್ವತಿ ಅವರನ್ನು ನಿನ್ನೆಯೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಕೂಡ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಆರೋಗ್ಯ ಸ್ಥಿರವಾಗಿದೆ. ಏನು ಸಮಸ್ಯೆ ಇಲ್ಲ. ಶ್ವಾಸಕೋಶ ಸಮಸ್ಯೆ ಇದೆ. ಈಗ ಸುಧಾರಣೆ ಕಾಣ್ತಿದೆ. ಈ ಎರಡ್ಮೂರು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಚಿಕಿತ್ಸೆಯನ್ನು ಮುಂದುವರೆಸಬೇಕಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿರುವ ಪಾರ್ವತಿ ಅವರಿಗೆ ವೈದ್ಯರು ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ.

ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಶ್ವಾಸಕೋಶದ ಸಮಸ್ಯೆ ಉಂಟಾದ ಕಾರಣ ಪಾರ್ವತಿ ಅವರನ್ನು ಅಪೋಲೋ ಆಸ್ಪತ್ರೆಗೆ ನಿನ್ನೆಯೆ ದಾಖಲು ಮಾಡಿದ್ದರು. ಇಂದು ಕೂಡ ಐಸಿಯುನಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ಪಾರ್ವತಿ ಅವರು ಕೂಡ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಶ್ವಾಸಕೋಶದ ಸಮಸ್ಯೆ ಇರುವ ಕಾರಣದಿಂದ ಎರಡ್ಮೂರು ದಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಆಸ್ಪತ್ರೆಯಲ್ಲಿಯೇ ಇದ್ದರೆ ಬಹಳ ಬೇಗ ಚೇತರಿಸಿಕೊಳ್ಳುತ್ತಾರೆ ಎಂಬ ಕಾರಣಕ್ಕೆ, ಆರೋಗ್ಯದಲ್ಲಿ ಮತ್ತೆ ಏನು ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ಸದ್ಯ ಪಾರ್ವತಿ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...