Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಟುಂಬ ಹಾಗೂ ರಾಜಕೀಯ ಹಸ್ತಕ್ಷೇಪದಿಂದ ಸಹಕಾರಿ ಸಂಘಗಳು ಮುಕ್ತವಾಗಲಿ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ  

Facebook
Twitter
Telegram
WhatsApp

 

ಚಿತ್ರದುರ್ಗ.ಸೆ.16 : ದೇಶದ ಸಹಕಾರಿ ಕ್ಷೇತ್ರಕ್ಕೆ ಬಹುದೊಡ್ಡ ಇತಿಹಾಸವಿದೆ. ಹಲವಾರು ಸಹಕಾರಿ ಧುರೀಣರು ನಿಸ್ವಾರ್ಥದಿಂದ ಜನರ ಏಳಿಗೆಗಾಗಿ ಶ್ರಮಿಸಿದ್ದಾರೆ. ಇಂತಹ ಮಹನೀಯರ ಬದ್ಧತೆ ಹಾಗೂ ಮಹತ್ವಾಕಾಂಕ್ಷೆಯಿಂದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಿವೆ. ಕೆಲವು ಜಿಲ್ಲೆಗಳಲ್ಲಿ ಕುಟುಂಬ ಹಾಗೂ ರಾಜಕೀಯ ಹಸ್ತಕ್ಷೇಪದಿಂದಾಗಿ ಸಹಕಾರಿ ಸಂಘಗಳು ಅವನತಿಯ ಹಾದಿ ಹಿಡಿದಿವೆ. ಸಹಕಾರಿ ಸಂಘಗಳ ಸ್ವತ್ತನ್ನು ಕುಟುಂಬ ಹಾಗೂ ರಾಜಯಕೀಯ ಸ್ವಾರ್ಥಕ್ಕಾಗಿ ಬಳಸಿಕೊಂಡು, ರೈತರಿಗೆ ಮೋಸ ಮಾಡಲಾಗಿದೆ. ಇಂತಹ ಸನ್ನಿವೇಶಗಳಿಂದ ಸಹಕಾರಿ ಸಂಘಗಳು ಮುಕ್ತವಾಗಬೇಕು ಎಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಹಾಗೂ ಸಂಸದ ಎ.ನಾರಾಯಣ ಸ್ವಾಮಿ ಹೇಳಿದರು.

ಚಿತ್ರದುರ್ಗ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರಿ ಸಂಘದ ವತಿಯಿಂದ, ಸಹಕಾರಿ ಧುರೀಣ ದಿ.ಶರಣ ಎಂ ಗಂಗಾಧರಯ್ಯ ಜ್ಞಾಪಕಾರ್ಥ ಚಿತ್ರದುರ್ಗ ನಗರದ ಎಂ.ಪಿ.ಎಂ.ಸಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಾವಿರ ಮೆಟ್ರಿಕ್ ಟನ್ ಸಾಮಥ್ರ್ಯದ ಉಗ್ರಾಣವನ್ನು ಶುಕ್ರವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಸಹಕಾರಿ ಹಾಗೂ ವ್ಯವಸಾಯ ಉತ್ಪನ್ನ ಸಂಘಗಳು ಉದ್ದಿಮೆ, ಶಿಕ್ಷಣ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕು. ಕೇಂದ್ರ ಸರ್ಕಾರ ಎ.ಪಿ.ಎಂ.ಸಿಗಳಿಗೆ ಹೆಚ್ಚಿನ ಅಧಿಕಾರ ನೀಡಿದೆ. ಸಹಕಾರಿ ಸಂಘಗಳ ಮೂಲಕ ರೈತರಿಗೆ ಅಗತ್ಯವಾದ ಯೂರಿಯಾ ಹಾಗೂ ನ್ಯಾನ್ಯೋ ಗೊಬ್ಬರ, ಕೃಷಿ ಸಲಕರಣೆಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಕೃಷಿಯಲ್ಲಿ ನವೀನ ರೀತಿಯ ತಂತ್ರಜ್ಞಾನಗಳ ಕುರಿತು ಕೌಶಲ್ಯ ಬೆಳಸಲು ಕೃಷಿ ಇಲಾಖೆ ಮೂಲಕ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಇಂದು ರೈತ ಬೆಳದ ಬೆಳಯನ್ನು ಯಾವುದೇ ನಿರ್ಬಂಧವಿಲ್ಲದೆ ದೇಶ ವಿದೇಶಗಳಿಗೆ ಮಾರಾಟ ಮಾಡಬಹುದು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪಿ.ಎಂ.ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಪ್ರತಿಯೊಬ್ಬ ರೈತರ ಖಾತೆ 6 ಸಾವಿರ ರೂಪಾಯಿಗಳನ್ನು ನೇರವಾಗಿ ಜಮೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು 6 ಸಾವಿರ ರೂಪಾಯಿಗಳ ಜೊತೆಗೆ 4 ಸಾವಿರ ರೂಪಾಯಿಗಳನ್ನು ಸೇರಿಸಿ ಒಟ್ಟು 10 ಸಾವಿರ ರೂಪಾಯಿಗಳನ್ನು ರೈತರ ಖಾತೆ ಜಮೆ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರ ಮಕ್ಕಳಿಗಾಗಿ ರೈತವಿದ್ಯಾನಿಧಿ ಯೋಜನೆ ಜಾರಿಗೊಳಿಸಿದ್ದಾರೆ ಎಂದರು.

ನೂತನ ಉಗ್ರಾಣ ನಿರ್ಮಾಣಕ್ಕೆ ಅನುದಾನದ ಭರವಸೆ : ಚಿತ್ರದುರ್ಗ ಎ.ಪಿ.ಎಂ.ಸಿ ಆವರಣದಲ್ಲಿ ಅವಶ್ಯಕತೆ ಇರುವ ನೂತನ ಉಗ್ರಾಣ ನಿರ್ಮಾಣಕ್ಕೆ ಸಂಸದರ ನಿಧಿಯಡಿ ಅನುದಾನ ಒದಗಿಸಲಾಗುವುದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭರವಸೆ ನೀಡಿದರು. ಮುಂದುವರಿದು ಮಾತನಾಡಿದ ಅವರು ಕೇಂದ್ರ ಸರ್ಕಾರ ಒಂದು ಜಿಲ್ಲೆ ಒಂದು ಬೆಳೆ ಯೋಜನೆಯನ್ನು ಜಾರಿಗೊಳಿಸಿದೆ. ಚಿತ್ರದರ್ಗು ಜಿಲ್ಲೆಯಲ್ಲಿ ದಾಳಿಂಬೆ ಹಾಗೂ ಈರುಳ್ಳಿ ಬೆಳೆಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಜಿಲ್ಲೆಗೆ ಅಗತ್ಯ ಇರುವ ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಹೊಳಲ್ಕೆರೆ ವಿಧಾನ ಕ್ಷೇತ್ರ ವ್ಯಾಪ್ತಿಯ 250 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲಾಗಿದೆ. ರೈತರು ಸಂಪ್ರದಾಯ ಬೆಳಗಳನ್ನು ಹೊರತು ಪಡಿಸಿ, ಅಡಿಕೆ ಬೆಳೆ ಕಡೆ ಮುಖ ಮಾಡಿದ್ದಾರೆ. ಅಡಿಕೆ ಬೆಳೆಯ ಬದಲಿಗೆ ದವಸ ಧಾನ್ಯ, ತರಕಾರಿ ಬೆಳೆಯಲು ಪ್ರಯತ್ನಿಸಬೇಕು. ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಬೆಳೆ ಹಾನಿಯಾಗಿದೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಸಕರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ಬೆಳಪರಿಹಾರ ನೀಡಲು ಒಪ್ಪಿ ನೀಡಿದ್ದಾರೆ. ಜಿಲ್ಲೆಯ ಸಹಕಾರಿ ರಂಗದಲ್ಲಿ ಎಂ.ಗಂಗಾಧರಯ್ಯ ಹಾಗೂ ಅವರ ಮಿತ್ರರಾದ ಬಿ.ಎಲ್.ಗೌಡ ಅವರು ಚಿರಸ್ಮರಣೀಯ ಹೆಸರುಗಳು. ಇಬ್ಬರು ಧುರೀಣರು ರೈತರ ಜೀವನಾಡಿಯಾಗಿದ್ದರು. ಇವರ ಪ್ರಯತ್ನದ ಫಲವಾಗಿ ಹಿರಿಯೂರಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಯಾಯಿತು ಎಂದು ಶಾಸಕ ಎಂ.ಚಂದ್ರಪ್ಪ ಸ್ಮರಿಸಿದರು.

ಸಾಣೇಹಳ್ಳಿಯ ತರಳುಬಾಳು ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕರಾದ ಎಸ್.ಆರ್.ಗಿರೀಶ್, ಸುರೇಶ್ ಹೊಸಕೋಟೆ, ಹನುಮಂತರಾಯ, ವ್ಯವಸ್ಥಾಪಕ ನಿರ್ದೇಶಕ ಎಸ್.ಅರಳಿ ಸೂರ್ಯಕಾಂತ್, ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಹೆಚ್.ಮೂರ್ತಿ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್, ಜಂಟಿ ಕೃಷಿ ನಿರ್ದೇಶಕ ಜಿ.ರಮೇಶ್ ಕುಮಾರ್, ಎ.ಪಿ.ಎಂ.ಸಿ ಹೆಚ್ಚುವರಿ ನಿರ್ದೇಶಕ ಹಾಗೂ ಕಾರ್ಯದರ್ಶಿ ನಜೀಬ್ ಉಲ್ಲಾಖಾನ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಟಿ.ಮಧು ಶ್ರೀನಿವಾಸ್, ಚಿತ್ರದುರ್ಗ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘದ ಅಧ್ಯಕ್ಷ ಹೆಚ್.ಎಂ.ಮಂಜುನಾಥಪ್ಪ, ಕಾರ್ಯದರ್ಶಿ ಜಿ.ಎನ್.ಉಮಾಶಂಕರ್, ಉಪಾಧ್ಯಕ್ಷ ಸಿ.ಕುಬೇರಪ್ಪ, ಸಂಘದ ಆಡಳಿತ ಮಂಡಳಿಯ ನಿರ್ದೇಶಕರು ಸರ್ವಸದಸ್ಯರು ಉಪಸ್ಥಿತರಿದ್ದರು.

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!