ದೆಹಲಿ.ಜೂನ್.19: ಕಾಕ್ರೋಚ್ ಜನತಾ ಪಾರ್ಟಿ (CJP) ಯುವ ಸಂಘಟನೆಯ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇತ್ತೀಚಿನ ಪರೀಕ್ಷಾ ವಿವಾದಗಳ ನಡುವೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಜೂನ್ 20 ರಂದು ಜಂತರ್ ಮಂತರ್ನಲ್ಲಿ ಸಿಜೆಪಿ ಹಮ್ಮಿಕೊಂಡಿರುವ ಎರಡನೇ ಹಂತದ ಬೃಹತ್ ಪ್ರತಿಭಟನೆಗೆ ಮುನ್ನ ಈ ಮನವಿ ಮಾಡಲಾಗಿದೆ. ಪರೀಕ್ಷಾ ಅಕ್ರಮಗಳು ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಉತ್ತರದಾಯಿತ್ವದ ಕೊರತೆಯ ವಿರುದ್ಧ ಈ ಪ್ರತಿಭಟನೆ ನಡೆಯಲಿದೆ.

ನಮ್ಮ ದೇಶದ ಭವಿಷ್ಯವಾಗಿರುವ ಯುವ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಜೀವನಕ್ಕೆ ಎದುರಾಗಿರುವ ಬಿಕ್ಕಟ್ಟಿನ ಕಡೆಗೆ ನಿಮ್ಮ ಗಮನ ಸೆಳೆಯಲು ಭಾರವಾದ ಹೃದಯದಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದು ದಿಪ್ಕೆ ಹೇಳಿದ್ದಾರೆ. ಕಳೆದ ಕೆಲವು ವಾರಗಳಲ್ಲಿ 11 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಮರುಪರೀಕ್ಷೆಯ ಆತಂಕದಲ್ಲಿ ವಿದ್ಯಾರ್ಥಿ ಸಮೂಹ ಕಂಗಾಲಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಮೃತಪಟ್ಟ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಬ್ಯಾಂಕ್ ಸಾಲ ಹಾಗೂ ಜೀವಮಾನದ ಉಳಿತಾಯವನ್ನು ಹೂಡಿಕೆ ಮಾಡಿದ್ದರು. ಪೇಪರ್ ಲೀಕ್ ಹಗರಣದಿಂದಾಗಿ ಮಕ್ಕಳನ್ನು ಕಳೆದುಕೊಂಡು ಈ ಕುಟುಂಬಗಳು ಬೀದಿಗೆ ಬಿದ್ದಿವೆ. ಹಾಗಾಗಿ ಸರ್ಕಾರ ತಕ್ಷಣವೇ ತಲಾ 1 ಕೋಟಿ ರೂ. ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಲಾಗಿದೆ.
ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಯವರ ಇಚ್ಛೆಯ ಮೇರೆಗೆ ಸಚಿವರು ಅಧಿಕಾರದಲ್ಲಿರುತ್ತಾರೆ, ಹಾಗಾಗಿ ಪ್ರಧಾನಿ ಮೋದಿ ಅವರೇ ನೇರ ಹೊಣೆ ಹೊತ್ತು ಶಿಕ್ಷಣ ಸಚಿವರನ್ನು ವಜಾಗೊಳಿಸಬೇಕು ಎಂದು ದಿಪ್ಕೆ ಆಗ್ರಹಿಸಿದ್ದಾರೆ.
ಜೂನ್ 6 ರಂದು ನವದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಮೊದಲ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರ ಮುಂದುವರಿದ ಭಾಗವಾಗಿ ಜೂನ್ 20 ರಿಂದ ದೇಶದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ದೆಹಲಿಗೆ ಆಗಮಿಸುತ್ತಿದ್ದು, ಪೇಪರ್ ಲೀಕ್ ವಿರುದ್ಧ ಮತ್ತು ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ಬೃಹತ್ ಧರಣಿ ನಡೆಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













