ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬೆನ್ನಲ್ಲೇ ಕಾಂಗ್ರೆಸ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಮತದಾರರ ಡಾಟಾ ಕದಿಯುವ ಕೆಲಸದಲ್ಲಿ ತೊಡಗಿದೆ ಎಂದು ಹೇಳುತ್ತಿದೆ. ಅದಕ್ಕೆ ಚಿಲುಮೆ ಎಂಬ ಖಾಸಗಿ ಸಂಸ್ಥೆಯ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪ ಮಾಡಲಾಗಿದೆ.

ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಪಡಿಸಿಕೊಂಡು, ಚಿಲುಮೆ ಸಂಸ್ಥೆ ಮತದಾರರ ಡಾಟಾವನ್ನು ಕದಿಯುತ್ತಿದೆ. ಬೆಂಗಳೂರು ಉಸ್ತುವಾರಿಯನ್ನು ಬೊಮ್ಮಾಯಿ ಅವರೇ ಇಟ್ಟುಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ಅವರೇ ಇದಕ್ಕೆ ನೇರ ಹೊಣೆ.

ಚಿಲುಮೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಸೇರಿಕೊಂಡು ಚುನಾವಣಾ ಅಧಿಕಾರಿಗಳಂತೆ ದತ್ತಾಂಶ ಸಂಗ್ರಹಕ್ಕೆ ಅವಕಾಶ ನೀಡುತ್ತಿದ್ದಾರೆ. ಈ ಸಂಬಂಧ ಪೊಲೀಸ್ ಕಮಿಷನರ್ ಗೆ ದೂರು ಸಲ್ಲಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.


