Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿಕ್ಕಮಗಳೂರಿನಲ್ಲಿ ಕಾಲೇಜು ಬಸ್ ಭೀಕರ ಅಪಘಾತ : ಐದು ವಿದ್ಯಾರ್ಥಿಗಳು ಗಂಭೀರ..!

---Advertisement---

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಲ್ಲಿ ನಡೆದಿದೆ. ಘಟನೆಯಲ್ಲಿ ಐದು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಬಸ್ ನಲ್ಲಿ ಹತ್ತು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಿದ್ದರು.

ವಿದ್ಯಾರ್ಥಿಗಳೆಲ್ಲಾ ರಜೆಯ ಖುಷಿಯಲ್ಲಿದ್ದರು. ಕಾಲೇಜಿನಿಂದ ಟ್ರಿಪ್ ಪ್ಲ್ಯಾನ್ ಮಾಡಿದ್ದರು. ಪಿಕ್ನಿಕ್ ಮುಗಿಸಿ ವಾಪಾಸ್ ಆಗುವಾಗ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ಬಸ್ ಅಪಘಾತಕ್ಕೀಡಾಗಿದೆ.

ಬಸ್ ನಲ್ಲಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಐವರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಚಿಕಿತ್ಸೆ ಕೂಡ ಕೊಡಿಸಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...