ಧಾರವಾಡ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತೀವ್ರತೆ ಪಡೆಯುತ್ತಿದೆ. ಈ ಮಧ್ಯೆ ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಅವರನ್ನ ಕರೆತರಲು ನಮ್ಮ ಸರ್ಕಾರ ಸಾಕಷ್ಟು ಶ್ರಮವಹಿಸುತ್ತಿದೆ. ಆದರೂ ಕನ್ನಡದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ನವೀನ್ ಮೃತ ದೇಹವನ್ನ ಆ ಯುದ್ಧಭೂಮಿಯಿಂದ ತರ್ತಾರಾ ಕರುನಾಡಿಗೆ ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿದೆ.

ಈ ಬಗ್ಗೆ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿ, ಜೀವಂತವಾಗಿರುವವರನ್ನೇ ಕರೆತರುವುದು ಕಷ್ಟವಾಗಿದೆ. ಹೀಗಿರುವಾಗ ನವೀನ್ ಮೃತದೇಹ ತರುವುದು ಇನ್ನು ಕಷ್ಟಕರವಾಗಿದೆ.ಭಾರತ ಸರ್ಕಾರದ ವಿದೇಶಾಂಗ ಇಲಾಖೆ ಎಂಬಿಬಿಎಸ್ ವಿದ್ಯಾರ್ಥಿ ಶವ ತರಲು ಪ್ರಯತ್ನ ಮಾಡುತ್ತಿದೆ. ಸ್ವತಃ ಪ್ರಧಾನಿ ಮೋದಿ ಅವರೇ ಮುತುವರ್ಜಿ ವಹಿಸಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನ ನಡೆದಿದೆ.

ವಿಮಾನದಲ್ಲಿ ಶವ ತರೋದಕ್ಕೆ ಹೆಚ್ಚು ಜಾಗ ಬೇಕು. ಒಂದು ಶವ ತರವ ಜಾಗದಲ್ಲಿ 8 ಜನ ಪ್ರಯಾಣ ಮಾಡಬಹುದು. ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನ ನಡೆದಿದೆ. ಅಲ್ಲಿ ಯುದ್ದ ಭೂಮಿ ಇದೆ. ಮಾಧ್ಯಮದವರೇ ಅದನ್ನ ತೊರಿಸುತ್ತಿದ್ದಾರೆ. ಸಾಧ್ಯವಾದರೆ ಮೃತದೇಹ ತರುವ ಕೆಲಸ ಆಗಲಿದೆ ಎಂದಿದ್ದಾರೆ.


