
ತುಮಕೂರು: ಚುನಾವಣೆ ಸನಿಹವಾಗುತ್ತಿದೆ. ಇನ್ನು ಕೆಲವೇ ತಿಂಗಳಿನಲ್ಲಿ ಚುನಾವಣೆ ಎದುರಾಗಲಿದೆ. ಅದಕ್ಕಾಗಿ ಈಗಿನಿಂದಾನೇ ಮೂರು ಪಕ್ಷದ ಮುಖಂಡರು ಜನರ ನಡುವೆ ಸಂಚಾರ ಆರಂಭಿಸಿದ್ದಾರೆ, ಸಮಸ್ಯೆಗಳನ್ನು ಕೇಳುತ್ತಿದ್ದಾರೆ, ಭರವಸೆಗಳನ್ನು ನೀಡುತ್ತಿದ್ದಾರೆ. ಇದೀಗ ಟೆನ್ನಿಸ್ ಕೃಷ್ಣ ಕೂಡ ತಾವೂ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಹಾಸ್ಯ ನಟ ಟೆನ್ನಿಸ್ ಕೃಷ್ಣ ಕಳೆದ ಬಾರಿಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದರು. ಇದೀಗ ಅದೇ ಪಕ್ಷದಿಂದ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಸ್ಪರ್ಧೆಯ ಬಗ್ಗೆ ಅಧಿಕೃತವಾಗಿ ಅನೌನ್ಸ್ ಮಾಡಿದ್ದಾರೆ.
ತುಮಕೂರಿನ ತುರುವೆಕೆರೆ ವಿಧಾನಸಭಾ ಕ್ಷೇತ್ರದಿಂದ ಟೆನ್ನಿಸ್ ಕೃಷ್ನ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ತುಮಕೂರು ನಗರದಲ್ಲಿ ಮಾತನಾಡಿದ ಟೆನ್ನಿಸ್ ಕೃಷ್ಣ, ತುರುವೆಕೆರೆ ಕ್ಷೇತ್ರದಿಂದ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಬಡವರ ಪರವಾಗಿ ಏನಾದರೂ ಕೆಲಸ ಮಾಡಬಹುದು ಎಂದು ಬಂದಿದ್ದೇನೆ. ಈ ಪಕ್ಷ ಬೇರೆ ರಾಜ್ಯದಲ್ಲಿ ಕೆಲಸ ಮಾಡಿ ತೋರಿಸಿದೆ. ಕರ್ನಾಟಕದಲ್ಲಿ ಈಗ ಕರ್ನಾಟಕದಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.

GIPHY App Key not set. Please check settings