ಕಾಂಗ್ರೆಸ್ ಸೇರ್ಪಡೆಯಾದ ಹಾಸ್ಯ ನಟ : ಜವಬ್ದಾರಿ ಏನು ಗೊತ್ತಾ..?

1 Min Read

ಚುನಾವಣೆ ಹತ್ತಿರವಾಗುತ್ತಿದೆ. ಈಗಾಗಲೆ ಹಲವರು ಆ ಪಕ್ಷ ಬಿಟ್ಟು ಈ ಪಕ್ಷ ಈ ಪಕ್ಷ ಬಿಟ್ಟು ಆ ಪಕ್ಷ ಅಂತ ರನ್ನಿಂಗ್ ರೇಸ್ ಮಾಡುತ್ತಿದ್ದಾರೆ. ಇದರ ನಡುವೆ ಪಕ್ಷಕ್ಕೆ ಆಹ್ವಾನ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಇಂದು ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾಧುಕೋಕಿಲ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡಿದ್ದಾರೆ. ಹೂಗುಚ್ಛ ನೀಡಿ, ಶಾಲು ಹೊದಿಸಿ ಸ್ವಾಗತಿಸಿದ್ದಾರೆ. ಇನ್ನು ಕೆಪಿಸಿಸಿಯಲ್ಲಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುನಾರ್, “ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಶ್ರೀ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ” ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks