Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಡದಿ ಟೌನ್ ಶಿಪ್ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ಸಮಿತಿ ರಚನೆ : ಸಿಎಂ ಡಿ.ಕೆ. ಶಿವಕುಮಾರ್

---Advertisement---

ಬೆಂಗಳೂರು. ಆಗಸ್ಟ್.9: ಬಿಡದಿ ಟೌನ್ ಶಿಪ್ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಸಿಎಂ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.

ಬಿಡದಿ ಟೌನ್ ಶಿಪ್ (ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತ್ತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ನಮ್ಮ ಸರ್ಕಾರ ಆದೇಶಿಸಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್.ವಿ. ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಸಮಿತಿಯು ಸದರಿ ಯೋಜನೆಯನ್ನು ಕಾನೂನಾತ್ಮಕ, ಮಾನವೀಯತೆ ಹಾಗೂ ಸಮಗ್ರ ಅಭಿವೃದ್ಧಿಯ ಚೌಕಟ್ಟಿನಲ್ಲಿ ವಿಶ್ಲೇಷಣೆಗೊಳಪಡಿಸಿ ತನ್ನ ಶಿಫಾರಸ್ಸನ್ನು ನೀಡಲಿದೆ.

ಯೋಜನೆಯನ್ನು ಜನಸ್ನೇಹಿಯಾಗಿ ಜಾರಿಗೊಳಿಸಲು ಸಾರ್ವಜನಿಕರ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಮನ್ನಣೆ ನೀಡುವುದಾಗಿ ನಮ್ಮ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಜನರ ಆಶೋತ್ತರಗಳನ್ನು ಗೌರವಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಯೋಜನೆಯನ್ನು ಮತ್ತಷ್ಟು ಉತ್ತಮವಾಗಿ ರೂಪಿಸುವುದು ನಮ್ಮ ಸರ್ಕಾರದ ಆಶಯವಾಗಿದ್ದು, ಈ ಹಿನ್ನೆಲೆಯಲ್ಲಿ ನಾವು ಸಮಿತಿಯನ್ನು ರಚಿಸಿದ್ದೇವೆ ಎಂದು ತಿಳಿಸಿದ್ದಾರೆ.

Join WhatsApp

Join Now

Join Telegram

Join Now