Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಗದ್ದಲ : ಉಗ್ರಪ್ಪ ಕ್ಷಮೆ ಕೇಳಲಿ : ಬಿ.ಟಿ. ಜಗದೀಶ್ ಬೆಂಬಲಿಗರ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ಜಿಲ್ಲಾ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಂಘಟನ್ ಸೃಜನ್ ಅಭಿಯಾನ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಬಿ.ಟಿ.ಜಗದೀಶ್ ಪರ ಆಗಮಿಸಿದ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜನ್ ಇವರುಗಳಿಗೆ ನೀವುಗಳು ಬಿಜೆಪಿ.ಯವರ ತರ ಕಾಣಿಸುತ್ತಿದ್ದೀರ ಎಂದು ಕೆಪಿಸಿಸಿ. ಉಪಾಧ್ಯಕ್ಷ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವಮಾನಿಸಿದಾಗ ಕುಪಿತಗೊಂಡ ಶ್ರೀರಾಮ್ ನಾವುಗಳು ನಿಜವಾದ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದಿಂದ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದೇನೆಂದು ಏರು ಧ್ವನಿಯಲ್ಲಿ ವಿ.ಎಸ್.ಉಗ್ರಪ್ಪನವರಿಗೆ ಮನವರಿಕೆ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬಿ.ಟಿ.ಜಗದೀಶ್ ಸಮರ್ಥರಿದ್ದಾರೆ. ಅವರ ಪರವಾಗಿ ವರಿಷ್ಟರನ್ನು ಕೇಳುವ ಹಕ್ಕು ನಮಗಿಲ್ಲವೇ? ಎಂದು ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್ ಕುಪಿತಗೊಂಡಾಗ ಜೊತೆಯಲ್ಲಿದ್ದ ಅನೇಕ ಬೆಂಬಲಿಗರು ವಿ.ಎಸ್.ಉಗ್ರಪ್ಪನವರು ನಡೆದುಕೊಂಡು ರೀತಿಯನ್ನು ಖಂಡಿಸಿ ನಮ್ಮನ್ನು ಬಿಜೆಪಿ.ಯವರ ತರ ಕಾಣುತ್ತಿದ್ದೀರೆಂದು ನೀವು ಹೀಯಾಳಿಸಿದ್ದನ್ನು ನಾವುಗಳು ಸಹಿಸಿಕೊಂಡು ಸುಮ್ಮನಿರಲ್ಲ. ಕ್ಷಮೆ ಕೇಳಿ ಎಂದು ಪಟ್ಟು ಹಿಡಿದರು.

ವೀಕ್ಷಕರಾಗಿ ಜಿಲ್ಲೆಗೆ ಬಂದಿರುವ ಅಸ್ಸಾಂನ ರಿಪುನ್ ಬೊಹರಾ, ಕೆಪಿಸಿಸಿ. ಪ್ರಧಾನ ಕಾರ್ಯದರ್ಶಿಗಳಾದ ಸೈಯದ್ ಅಹಮದ್, ರಮೇಶ್‍ಕುಮಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಇವರುಗಳು ಸಮಾಧಾನ ಪಡಿಸಿ ಪ್ರತಿಯೊಬ್ಬರನ್ನು ಪ್ರತ್ಯೇಕವಾಗಿ ಕರೆದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹಿಸಲಾಗುವುದೆಂದು ಸಮಾಧಾನಪಡಿಸಿದರು.

ವಿ.ಎಸ್.ಉಗ್ರಪ್ಪನವರ ವರ್ತನೆಯಿಂದ ಅಸಮಾಧಾನಗೊಂಡಿರುವ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್ ಹಾಗೂ ಬೆಂಬಲಿಗರು ಕ್ಷಮೆ ಕೇಳುವಂತೆ ವಿ.ಎಸ್.ಉಗ್ರಪ್ಪನವರಲ್ಲಿ ಒತ್ತಾಯಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now