ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 05 : ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಘಟಕದಿಂದ ಸೂರಿಗಾಗಿ ಸಮರ ನಗರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗೆ ಮನವಿ ಸಲ್ಲಿಸಲಾಯಿತು.
ನಗರದ ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಾರ್ಯಾಲಯದಿಂದ ಮೆರವಣಿಗೆ ಮೂಲಕ ನಗರಸಭೆಗೆ ಆಗಮಿಸಿದ ಪ್ರತಿಭಟನಾಕಾರರು ಬಡವರಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ ನಗರದಲ್ಲಿ ನಿವೇಶನ, ಮನೆಗಳಿಲ್ಲದೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡವರು ಜೀವಿಸುವುದು ಕಷ್ಟವಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ವಸತಿಗಾಗಿ ಹೋರಾಟ ನಡೆಸಿದ ಪ್ರತಿಫಲವಾಗಿ ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲಿಯೂ ಸರ್ವೆ ನಡೆಸಿ ನಿವೇಶನ ಮನೆ ಇಲ್ಲದವರನ್ನು ಗುರುತಿಸುವಂತೆ ರಾಜ್ಯದ ಮುಖ್ಯಮಂತ್ರಿ ಆದೇಶಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.
ಕಮ್ಯುನಿಸ್ಟ್ ತಾಲ್ಲೂಕು ಕಾರ್ಯದರ್ಶಿ ಟಿ.ಆರ್.ಉಮಾಪತಿ, ಸಹ ಕಾರ್ಯದರ್ಶಿಗಳಾದ ಈ.ಸತ್ಯಕೀರ್ತಿ, ಜಯದೇವಮೂರ್ತಿ, ಪರ್ವಿನ್‍ತಾಜ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















