Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೃತ ಐಎಎಸ್ ಮಹಂತೇಶ್ ಪುತ್ರಿಗೆ ಅನುಕಂಪದ ನೌಕರಿ : ಯಾವ ಇಲಾಖೆ..? ಏನು ಪೋಸ್ಟ್..?

---Advertisement---

ಇತ್ತೀಚೆಗೆ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ನಿಧನರಾಗಿದ್ದರು. ಇದೀಗ ಸರ್ಕಾರ ಅವರ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಲಾಗಿದೆ. ಅವರ ಪುತ್ರಿ ಚೈತನ್ಯ ಮಹಾಂತೇಶ್ ಅವರಿಗೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಮಹಾಂತೇಶ್ ಬೀಳಗಿ ನಿಧನದ ಬೆನ್ನಲ್ಲೇ ಅವರ ಮಗಳಿಗೆ ಸರ್ಕಾರಿ ಕೆಲಸ ನೀಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಇದೀಗ ಅಧಿಕೃತವಾಗಿ ನೇಮಕಾತಿಯ ಆದೇಶ ಹೊರಡಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಚೇರಿಯಲ್ಲಿ ಆದೇಶ ಪ್ರತಿಯನ್ನು ನೀಡಿದ್ದಾರೆ. ಈ ವೇಳೆ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಮ್ ಅವರು ಉಪಸ್ಥಿತರಿದ್ದರು. ಒಳ್ಳೆಯದಾಗಲಿ ಎಂದು ಹರಸಿ ಪತ್ರವನ್ನು ಹಸ್ತಾಂತರಿಸಿದರು‌.

ಭಾರತೀಯ ಆಡಳಿತ ಸೇವೆಗೆ ಸೇರಿದ ದಕ್ಷ ಅಧಿಕಾರಿಯಾಗಿದ್ದ ಮಹಾಂತೇಶ ಬೀಳಗಿ ಅವರು ಸೇವೆಯಲ್ಲಿದ್ದಾಗಲರೆ ನಿಧನರಾದರು. ಹೀಗಾಗಿ ಅವರ ಕುಟುಂಬಕ್ಕೆ ನೆರವಾಗುವುದಕ್ಕಾಗಿ ಅನುಕಂಪದ ಆಧಾದ ಮೇಲೆ, 1996ರ ನಿಯಮ 6(1)ರನ್ವಯ ಈ ಕ್ರಮ ಕೈಗೊಂಡಿದೆ. ದಿವಂಗತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿ ಕುಮಾರಿ ಚೈತನ್ಯಾ ಎಂ.ಬೀಳಗಿ ಅವರಿಗೆ ಕರ್ನಾಟಕ ಸರ್ಕಾರವೂ ಅನುಕಂಪದ ಆಧಾರದ‌ ಮೇಲೆ ಸಚಿವಾಲಯದಲ್ಲಿ ಸಹಾಯಕ ಹುದ್ದೆಯನ್ನು ನೀಡಲಾಗಿದೆ. ಈ ಸೇವೆಗೆ 49,050 ದಿಂದ 92,500 ರೂಪಾಯಿ ತನಕ ವೇತನ ಶ್ರೇಣಿಯನ್ನು ನಿಗದಿ ಮಾಡಲಾಗಿದೆ. ನೇಮಕಾತಿ ಆದೇಶ ಹೊರಡಿಸಿದ 15 ದಿನಗಳ ಒಳಗಾಗಿ ಅಭ್ಯರ್ಥಿಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಇಲಾಖೆಯ ಬಹುಮಹಡಿ ಕಟ್ಟಡ ಸಂಖ್ಯೆ 428ರಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಾಗಿರುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now