Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

S ಪದ ಉಚ್ಛಾರ ಮಾಡಿದ್ದ ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು..!

---Advertisement---

ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಸಿಕ್ಕಾಪಟ್ಟೆ ಸ್ಟ್ರಾಂಗ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಷ್ಟೇ ಅವರ ಭಾಷೆಯ ಮೇಲೂ ನೋಡುಗರಿಗೆ ಬೇಸರವಿದೆ. ಈಡಿಯಟ್ ಅಂತಾರೆ, ನೀನೆಲ್ಲಿಂದ ಬಂದಿದ್ದೀಯಾ ಗೊತ್ತು ಅಂತಾರೆ, ಎಸ್ ಪದ ಬಳಕೆ ಮಾಡ್ತಾರೆ. ಅದು ಜಾತಿ ವಿಚಾರದ ಬಗ್ಗೆ ಮಾಡುವ ಉಲ್ಲೇಖ. ಇದೀಗ ಅದೇ ಪದ ಬಳಕೆಯಿಂದಾಗಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.

ರಕ್ಷಿತಾನ ಕಂಡರೆ ಅಶ್ವಿನಿಗೆ ಆಗುವುದೇ ಇಲ್ಲ. ಅದಕ್ಕೆ ಜಾಹ್ನವಿ ಹಾಗೂ ಕಾಕ್ರೋಚ್ ಸುಧಿ ಕೂಡ ಬೆಂಬಲ ಕೊಡ್ತಾ ಇರ್ತಾರೆ. ರಕ್ಷಿತಾ ಮೇಲೆ ಮಾತಿನ ನಡೆಸುವ ಕಾರಣಕ್ಕೆ ಈಗಾಗಲೇ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಆದರೂ ಅಶ್ವಿನಿ ಅವರ ನಡವಳಿಕೆಯಲ್ಲೇನು ಕಡಿಮೆಯಾದಂತೆ ಕಾಣಿಸುತ್ತಿಲ್ಲ. ಇದರ ಬೆನ್ನಲ್ಲೇ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ.

ಇದೊಂದು ವ್ಯಕ್ತಿತ್ವದ ನಿಂದನೆ ಎಂದು ಆರೋಪಿಸಿ ಅಶ್ವಿನಿ ಗೌಡ ಹಾಗೂ ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧ ದೂರು ನೀಡಿದ್ದಾರೆ. ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಪೊಲೀಸರಿಗೆ ಈ ಸಂಬಂಧ ದೂರು ನೀಡಿದ್ದು, ದೂರು ಸ್ವೀಕರಿಸಿದ ಪೊಲೀಸರು ಎನ್ ಸಿ ಆರ್ ಅಂದ್ರೆ ಗಂಭೀರವಲ್ಲದ ಪ್ರಕರಣವನ್ನ ದಾಖಲು ಮಾಡಿಕೊಂಡಿದ್ದಾರೆ. ಅಶ್ವಿನಿ ಗೌಡ ಮನೆಯೊಳಗೆ ರಕ್ಷಿತಾ ಬಗ್ಗೆ ಮಾತನಾಡುವಾಗ, She is S.. ಆ ಕೆಟಗರಿ ನ ಎಂದು ಮಾತನಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ದೂರು ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...