Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭದ್ರಾಮೇಲ್ದಂಡೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ : ಕರವೇ ಕನ್ನಡ ಸೇನೆ ಕಾರ್ಯಕರ್ತರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಶೀಘ್ರವಾಗಿ ಪೂರೈಸಿ ಜಿಲ್ಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಭದ್ರಾ ಮೇಲ್ದಂಡೆ ಯೋಜನೆಯನ್ನು ತಡ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಬರಪೀಡಿತ ಪ್ರದೇಶ ಚಿತ್ರದುರ್ಗ ಜಿಲ್ಲೆಯ ರೈತರು ಮಳೆಯನ್ನೇ ನೆಚ್ಚಿಕೊಂಡಿದ್ದು, ಅತಿ ವೃಷ್ಠಿ ಅನಾವೃಷ್ಠಿ ಎರಡರಿಂದಲೂ ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ 2024 ರೊಳಗಾಗಿ ಕಾಮಗಾರಿಯನ್ನು ಮುಗಿಸಿ ನೀರು ಹರಿಸಬೇಕು. ಇಲ್ಲಿಯವರೆಗೂ ಅಧಿಕಾರ ನಡೆಸಿದ ಎಲ್ಲಾ ಪಕ್ಷಗಳು ರೈತರಿಗೆ ಜನಸಾಮಾನ್ಯರಿಗೆ ಪೊಳ್ಳು ಭರವಸೆಯನ್ನು ನೀಡುವುದರಲ್ಲಿಯೇ ಕಾಳ ಕಳೆಯುತ್ತಿವೆ ವಿನಃ ಕಾಮಗಾರಿ ಮಾತ್ರ ಶೂನ್ಯ. ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿರುವುದನ್ನು ಬಿಟ್ಟರೆ ಹಣ ಮಾತ್ರ ಬಿಡುಗಡೆಯಾಗಿಲ್ಲ. ಜಿಲ್ಲೆಯ ಎಲ್ಲಾ ಶಾಸಕರು, ಸಚಿವರು, ಸಂಸದರು ಪಕ್ಷ ಭೇದ ಮರೆತು ಭದ್ರಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವತ್ತ ಗಮನ ಕೊಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಧ್ಯ ಕರ್ನಾಟಕದ ಉಸ್ತುವಾರಿ ರವಿಕುಮಾರ್‍ನಾಯ್ಕ, ರಾಜ್ಯಾಧ್ಯಕ್ಷ ಅರುಣ್‍ಕುಮಾರ್ ಎನ್. ಸಂಘಟನಾ ಕಾರ್ಯದರ್ಶಿ ಅಶೋಕ್, ಮಹಿಳಾ ಅಧ್ಯಕ್ಷೆ ಆಶಾ, ರೈತ ಘಟಕದ ರಾಜ್ಯಾಧ್ಯಕ್ಷ ಸ್ವಾಮಿ ಟಿ. ಅಶ್ವಿನಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕ ರಾಜಣ್ಣ, ಲಕ್ಷ್ಮಿ, ಗೀತಾಂಜಲಿ

ಸಿ.ಓಬಳೇಶ್‍ಯಾದವ್, ಸಿ.ಸತೀಶ್, ಎನ್.ಓಬಣ್ಣ, ಮುತ್ತಯ್ಯ, ಸೈಯದ್ ಅಲಿ, ಆಶಾ, ಇ.ಎನ್.ಲಕ್ಷ್ಮಿಕಾಂತ, ಏಕಾಂತಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿದ್ದರು.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment