Connect with us

Hi, what are you looking for?

ಪ್ರಮುಖ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಬೆಣ್ಣೆನಗರಿ ಸಂಪೂರ್ಣ ಲಾಕ್ ಡೌನ್

ಸುದ್ದಿಒನ್, ದಾವಣಗೆರೆ, (ಮೇ.20) : ಕೋವಿಡ್ ಹರಡುವಿಕೆ ಸರಪಳಿಯನ್ನು ತುಂಡರಿಸಿ ಜನರನ್ನು ರಕ್ಷಿಸಬೇಕೆಂಬ ಕಾರಣಕ್ಕೆ ದಾವಣಗೆರೆ ಉಸ್ತುವಾರಿ ಸಚಿವರು ದಾವಣಗೆರೆ ಲಾಕ್ ನಿರ್ಧಾರ ಪ್ರಕಟಿಸಿದ್ದಾರೆ.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 21ರ ಬೆಳಗ್ಗೆ 10 ರಿಂದ ಮೇ 24ರ ಬೆಳಗ್ಗೆ 6ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಮೇ 24 ರ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿಗಳೇ ನಿರ್ಧಾರ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟಲು ಮೂರು ದಿನಗಳ ಕಾಲ ಜಾರಿಗೊಳಿಸಿರುವ ಸಂಪೂರ್ಣ ಲಾಕ್‍ಡೌನ್‍ಗೆ ಸಹಕರಿಸಲು ಸಾರ್ವಜನಿಕರಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ ಎಂದರು.

ಸಂಪೂರ್ಣ ಲಾಕ್‍ಡೌನ್ ನಿಬಂಧನೆಗಳು :
ಲಾಕ್‍ಡೌನ್ ಆದೇಶದ ಅನ್ವಯ, ಎಲ್ಲಾ ಅಂಗಡಿ ಮುಂಗಟ್ಟುಗಳು/ವಾಣಿಜ್ಯ/ಕೈಗಾರಿಕಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಅಗತ್ಯ ಚಟುವಟಿಕೆಗಳಿಗೆ ವಾಹನಗಳಲ್ಲಿ ಸಂಚರಿಸುವುದನ್ನು ನಿರ್ಬಂಧಿಸಿ, ನಡೆದುಕೊಂಡು ಹೊಗಲು ಮಾತ್ರ ಅವಕಾಶ ನೀಡಲಾಗಿದೆ. ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಮದುವೆ ಸಮಾರಂಭಕ್ಕೆ ಈಗಾಗಲೇ ನೀಡಲಾಗಿರುವ ಅನುಮತಿ ಪ್ರಕರಣಗಳಲ್ಲಿ ಕೇವಲ 10 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಮದುವೆಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನು ನಿರ್ಬಂಧಿಸಲಾಗಿದೆ. ಉಳಿದ ಎಲ್ಲಾ ಸಾಮಾಜಿಕ, ಧಾರ್ಮಿಕ ಸಭೆ ಸಮಾರಂಭಗಳನ್ನು ಮೇ. 24 ರ ಬೆಳಿಗ್ಗೆ 6 ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಅಂತ್ಯಸಂಸ್ಕಾರ/ಶವ ಸಂಸ್ಕಾರಗಳಲ್ಲಿ ಗರಿಷ್ಟ 5 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಿದೆ. ದಾವಣಗೆರೆ ಜಿಲ್ಲೆಗೆ ಆಗಮಿಸುವವರನ್ನು ಪ್ರತಿ ಚೆಕ್ ಪೋಸ್ಟ್‍ಗಳಲ್ಲಿ ವಿಚಾರಣೆ ನಡೆಸಿ, ದಾವಣಗೆರೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆನ್ನು ಪಡೆದುಕೊಳ್ಳಲಾಗುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿ ಇರಬೇಕು.

ವಾಹನ ಬಳಕೆಯನ್ನು ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಬಳಸಬಹುದು, ವೈದ್ಯಕೀಯ ದಾಖಲೆಗಳನ್ನು ಚೆಕ್ ಪೋಸ್ಟ್‍ಗಳಲ್ಲಿ ತೋರಿಸಬೇಕು. ಇತರೆ ಎಲ್ಲಾ ಖಾಸಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ವೈದ್ಯಕೀಯ ಹಾಗೂ ತುರ್ತು ಸೇವೆಗಳ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳ ಕರ್ತವ್ಯ ನಿಮಿತ್ತ ಓಡಾಟಕ್ಕೆ ಯಾವುದೆ ನಿರ್ಬಂಧವಿರುವುದಿಲ್ಲ. ಆದರೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಪಾಸಣಾ ಸಿಬ್ಬಂದಿಗಳಿಗೆ ತೋರಿಸಬೇಕು.

ಕ್ಲಿನಿಕ್, ಆಸ್ಪತ್ರೆ, ಲಸಿಕೆ ಹಾಗೂ ಪರೀಕ್ಷೆ ಉದ್ದೇಶಗಳಿಗೆ ಕನಿಷ್ಟ ವೈದ್ಯಕೀಯ ದಾಖಲೆಗಳು, ವೈದ್ಯ ಸಲಹಾ ಚೀಟಿ, ಆಸ್ಪತ್ರೆಯಲ್ಲಿ ದಾಖಲಾದ ವಿವರಗಳ ರುಜುವಾತಿನೊಂದಿಗೆ ಸಂಚರಿಸಲು ಅನುಮತಿಸಲಾಗಿದೆ. ಹೋಟೆಲ್, ರೆಸ್ಟೋರೆಂಟ್‍ಗಳು, ಉಪಾಹಾರ ಗೃಹಗಳು ಪಾರ್ಸಲ್ ಸೇವೆಗಳನ್ನು ಗ್ರಾಹಕರ ಮನೆ ಬಾಗಿಲಿಗೆ ವಿತರಿಸಲು ಮಾತ್ರ ಅನುಮತಿ ಇದೆ. ಯಾವುದೇ ರೀತಿಯ ಪಾರ್ಸ್‍ಲ್‍ಗಳನ್ನು ಗ್ರಾಹಕರು ನೇರವಾಗಿ ಖರೀದಿಸಲು ಅವಕಾಶವಿರುವುದಿಲ್ಲ.

ಕೋವಿಡ್-19ಕ್ಕೆ ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಿದ ಎಲ್ಲಾ ಕಛೇರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರ್ಕಾರದ ಆದೇಶದಂತೆ ಕಾರ್ಯನಿರ್ವಹಿಸಬೇಕು. ಆದರೆ, ಈ ಕಛೇರಿಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಜಿಲ್ಲೆಯಲ್ಲಿ ಕಛೇರಿ ವೇಳೆಯನ್ನು ಮೀರಿ ತಮ್ಮ ಕರ್ತವ್ಯಗಳಿಗೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಜಿಲ್ಲೆಯ ನ್ಯಾಯಾಂಗದ ಅಧಿಕಾರಿ/ಸಿಬ್ಬಂದಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸುವುದಕ್ಕೆ ಅನುಮತಿಸಿದೆ.

ಹಾಲು, ಡೈರಿ ಹಾಗೂ ಹಾಲಿನ ಬೂತುಗಳು ಮತ್ತು ಮೊಟ್ಟೆ ಅಂಗಡಿಗಳು ಮಾತ್ರ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಬೆ.10 ಗಂಟೆಯವರೆಗೆ ತೆರೆಯಲು ಅನುಮತಿಸಲಾಗಿದೆ. ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್ ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ಆಮ್ಲಜನಕ ಉತ್ಪಾದನಾ ಘಟಕ, ನೀರು, ನೈರ್ಮಲ್ಯ ಸೇವೆಗಳಿಗೆ ಅನುಮತಿಸಲಾಗಿದೆ.

ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅಧಿಕೃತ ಪ್ರಯಾಣ ದಸ್ತಾವೇಜುಗಳು/ಟಿಕೆಟ್‍ಗಳನ್ನು ತೋರಿಸಿದರೆ ಮಾತ್ರ ಸಂಚರಿಸಲು ಅನುಮತಿಸಿದೆ. ಪಡಿತರ ನ್ಯಾಯಬೆಲೆ ಅಂಗಡಿಗಳು ತೆರೆಯಲು ಕೊಪನ್ ವ್ಯವಸ್ಥೆಯಿಂದ ಜನ ಗುಂಪು ಸೇರದಂತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಷರತ್ತಿಗೊಳಪಟ್ಟು ಅನುಮತಿಸಲಾಗಿದೆ.

ಇಂದಿರಾ ಕ್ಯಾಂಟೀನ್ ತೆರೆಯಲು ಅನುಮತಿಸಲಾಗಿದೆ. ದಿನಪತ್ರಿಕೆ, ದೃಶ್ಯಮಾಧ್ಯಮಗಳ ಸೇವೆಗಳಿಗೆ ಅನುಮತಿಸಲಾಗಿದೆ. ಎಲ್ಲಾ ರೀತಿಯ ಸರಕುಗಳ ಸಾಗಾಣಿಕೆಗೆ ಮತ್ತು ಖಾಲಿ ವಾಹನಗಳಿಗೆ ಅನುಮತಿಸಲಾಗಿದೆ, ವಿಶೇಷವಾಗಿ ಅಮ್ಲಜನಕ ತರುವ ವಾಹನಗಳನ್ನು ತಡೆರಹಿತ ಸಾಗಾಟವನ್ನು ಅನುಮತಿಸಲಾಗಿದೆ.

ನಿರ್ಗತಿಕರ ಕೇಂದ್ರ, ವೃದ್ದಾಶ್ರಮ, ಬಾಲಮಂದಿರ, ಬಾಲಾಶ್ರಮ, ಅನಾಥಶ್ರಮ ಇವುಗಳಿಗೆ ಅನುಮತಿ ಇದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ವ್ಯಕ್ತಿಗಳ ಸಂಚಾರವನ್ನು ಸರ್ಕಾರದ ಆದೇಶದಂತೆ ಅನುಮತಿ ಇದೆ. ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಹಾಪ್-ಕಾಮ್ಸ್ ಮೂಲಕ ಮಾತ್ರ ಸಾರ್ವಜನಿಕರಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಾಪ್-ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಆಯುಕ್ತರು, ಮಹಾನಗರಪಾಲಿಕೆ ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಿಲಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಮಾರಾಟ ಮಾಡಲು ಅನುಮತಿ ಕಲ್ಪಿಸಲಾಗಿದೆ.

ಕಿರಾಣಿ ಅಂಗಡಿಗಳು, ದಿನಸಿ, ಹಣ್ಣು ತರಕಾರಿಗಳು, ಮಾಂಸ ಮತ್ತು ಮೀನು, ಹಾಗೂ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮತ್ತು ಬಾರ್‍ಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿರುತ್ತದೆ.
ಅಡುಗೆ ಅನಿಲ ಕಾರ್ಯನಿರ್ವಹಣೆಯನ್ನು ಮನೆ ಬಾಗಿಲಿಗೆ ತಲುಪಿಸುವ ಷರತ್ತಿಗೊಳಪಟ್ಟು ಕಾರ್ಯನಿರ್ವಹಣೆಯನ್ನು ಅನುಮತಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧ ಇರುವುದಿಲ್ಲ.

ನಿರ್ಮಾಣ ಸ್ಥಳದಲ್ಲಿಯೇ ವಾಸವಾಗಿರುವ ಕಾರ್ಮಿಕರನ್ನು ಬಳಸಿಕೊಂಡು ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿಸಲಾಗಿದೆ. ಇ-ಕಾಮರ್ಸ್/ಹೋಮ್ ಡೆಲಿವರಿ ಸೇವೆಗಳ ಮುಖಾಂತರ ಎಲ್ಲಾ ವಸ್ತುಗಳನ್ನು ಮನೆಗೆ ಸರಬರಾಜು ಮಾಡಲು ಅನುಮತಿಸಲಾಗಿದೆ.

ವಿನಾಯತಿ ನೀಡಿರುವ ಅಗತ್ಯ ಚಟುವಟಿಕೆಗಳಲ್ಲಿ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ನಿಗದಿಪಡಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ವಿಭಾಗ 51 ರಿಂದ 60ರ ಅನ್ವಯ ಮತ್ತು ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯ್ದೆ, 2005ರ ವಿಭಾಗ 4, 5 ಮತ್ತು 10ರಂತೆ ಕ್ರಮ ಜರುಗಿಸಲಾಗುವುದು ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಶಾಸಕರಾದ ಪ್ರೊ.ಲಿಂಗಣ್ಣ, ಎಸ್.ಎ.ರವೀಂದ್ರನಾಥ್, ಪಾಲಿಕೆ ಮೇಯರ್ ಎಸ್.ಟಿ.ವೀರೇಶ್, ಎಸ್ಪಿ ಹನುಮಂತರಾಯ, ಜಿಪಂ ಸಿಇಒ ಡಾ.ವಿಜಯ ಮಹಾಂತೇಶ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!