ಚಿತ್ರದುರ್ಗ. ಫೆ.12: ದ್ವಿಚಕ್ರ ವಾಹನ ಸವಾರರು ಪ್ರತಿಯೊಬ್ಬರೂ ಕೂಡ ಜೀವ ರಕ್ಷಣೆ ಸಂಬಂಧ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
![](https://suddione.com/content/uploads/2024/10/gifmaker_me-5-1.gif)
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಅವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025 ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 04 ವರ್ಷ ವಯೋಮಾನದೊಳಗಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕೊಂಡೊಯ್ಯಲು ಬಳಸುವ ಶಿಶು ರಕ್ಷಾ ಕವಚ (ಸೇಫ್ಟಿ ಹಾರ್‍ನೆಸ್) ವನ್ನು ಸಾಂಕೇತಿಕವಾಗಿ ವಿತರಣೆ ಮಾಡಿ ಅವರು ಮಾತನಾಡಿದರು.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025 ಅಂಗವಾಗಿ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 04 ವರ್ಷ ವಯೋಮಾನದೊಳಗಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕೊಂಡೊಯ್ಯಲು ಬಳಸುವ ಶಿಶು ರಕ್ಷಾ ಕವಚ ವಿತರಣೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.
ಜಿಲ್ಲೆಯಲ್ಲಿ ರಾಷ್ಟ್ರೀಯ ಪ್ರಮುಖ ಹೆದ್ದಾರಿಗಳು ಹಾಗೂ ರಾಜ್ಯ ಹೆದ್ದಾರಿಗಳು ಹಾದು ಹೋಗಿರುವುದರಿಂದ ಗ್ರಾಮೀಣ ಭಾಗದಲ್ಲಿ ರಸ್ತೆ ಅಪಘಾತಗಳು ಆಗುವ ಸಾಧ್ಯತೆ ಇದ್ದು, ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ವಾಹನ ಚಾಲನೆ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ರಸ್ತೆ ನಿಯಮಗಳನ್ನು ಚಾಲಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳೆ ಸಿಂಘೆ ಮಾತನಾಡಿ, ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025 ಅಂಗವಾಗಿ 70 ಮಂದಿ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 04 ವರ್ಷ ವಯೋಮಾನದೊಳಗಿನ ಮಕ್ಕಳನ್ನು ಹೊಂದಿರುವ ಪೋಷಕರಿಗೆ ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕೊಂಡೊಯ್ಯಲು ಬಳಸುವ ಶಿಶು ರಕ್ಷಾ ಕವಚಗಳನ್ನು 10 ಮಂದಿಗೆ ಸಾಂಕೇತಿಕವಾಗಿ ವಿತರಣೆ ಮಾಡಲಾಗಿದ್ದು, ವಾಹನ ಸವಾರರು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ದ್ವಿಚಕ್ರ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ತಲೆಗೆ ಪೆಟ್ಟು ಬಿದ್ದು, ಪ್ರಾಣಾಪಾಯದಿಂದ ಪಾರಾಗಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ. ಕುಮಾರಸ್ವಾಮಿ, ಚಿತ್ರದುರ್ಗ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ದಿನಕರ್, ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕ ಹೇಮಂತ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಿಬ್ಬಂದಿ ಇದ್ದರು.
![](https://suddione.com/content/uploads/2025/01/studio-11.webp)
![](https://suddione.com/content/uploads/2025/02/site.webp)