Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಷ್ಟ್ರದ ಹಿತ ಚಿಂತನೆ ಯುವ ಜನತೆಯಿಂದ ಪ್ರಾರಂಭವಾಗಬೇಕು : ಕಿರಣ್ ವಿವೇಕವಂಶಿ

---Advertisement---

ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 04 : ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಸಂದೇಶ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದ್ದು, ಉತ್ತಮ ವ್ಯಕ್ತಿತ್ವ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಪ್ರಜ್ಞಾಪ್ರವಾಹ ಕರ್ನಾಟಕ ಉತ್ತರ ಪ್ರಾಂತ ಪ್ರಚಾರ ಪ್ರಮುಖ್ ಕಿರಣ್ ವಿವೇಕವಂಶಿ ಅಭಿಪ್ರಾಯಪಟ್ಟರು.

ನಗರದ ಶಂಕರ ಮಠ ಸಮೀಪ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಕನಸಿನ ಭಾರತ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸಮಾಜದ ಕೆಲಸಗಳನ್ನು ಒಟ್ಟುಗೂಡಿಸಿ, ಹಿಂದೂ ದೇಶದ ನಿರ್ಮಾಣದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಮಾತಿನಂತೆ ಎಲ್ಲರೂ ಶೀಲವಂತರಾಗಬೇಕು. ಶೀಲ ಅಥವಾ ನಡತೆಯ ಚಾರಿತ್ರ್ಯದ ನಿರ್ಮಾಣ ಒಂದು ದಿನಕ್ಕೆ ಸೀಮಿತವಾಗದೆ ಅದು ಸುದೀರ್ಘವಾಗಿರಬೇಕು ಎಂದರು.

ರಾಷ್ಟ್ರದ ಹಿತ ಚಿಂತನೆ ಯುವ ಜನತೆಯಿಂದ ಪ್ರಾರಂಭವಾಗಬೇಕು. ಮಾನವೀಯ ಮೌಲ್ಯಗಳ ಜೊತೆಗೆ ಸಮಗ್ರ ಏಕತೆಯ ಚಿಂತನಾ ಸಿದ್ಧಾಂತವನ್ನು ವಿಶ್ವಕ್ಕೆ ಬೋಧಿಸಿ ಯುವಜನತೆಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ಸ್ವಾಮಿ ವಿವೇಕಾನಂದರ ಚಿಂತನೆ, ಆದರ್ಶ ಬದುಕು ಇಡೀ ವಿಶ್ವಕ್ಕೆ ದಾರಿದೀಪವಾಗಿದೆ. ಅಮೆರಿಕದ ಚಿಕಾಗೋದಲ್ಲಿ ನಡೆದ ಸರ್ವಧರ್ಮ ಸಮೇಳನದಲ್ಲಿ ಇಡೀ ವಿಶ್ವಕ್ಕೆ ಹಿಂದೂ ಧರ್ಮದ ವಿಚಾರಧಾರೆಗಳನ್ನು ತಿಳಿಸುವ ಮೂಲಕ ಎಲ್ಲಾ ಧರ್ಮಗಳು ಹಿಂದೂ ಧರ್ಮದ ಅಡಿಯಲ್ಲಿ ನಿಲ್ಲುತ್ತವೆ ಎಂದು ತಿಳಿಸಿಕೊಟ್ಟಿದ್ದಾರೆ ಎಂದು ಸ್ಮರಿಸಿದರು. ಸ್ವಾಮಿ ವಿವೇಕಾನಂದರು ಹಾಗೂ ಪರಮಹಂಸರ ಬಾಂಧ್ಯವದಂತೆ ಗುರು-ಶಿಷ್ಯರ ಪರಂಪರೆಯನ್ನು ವಿದ್ಯಾರ್ಥಿಗಳು ಮುಂದುವರಿಸಬೇಕು. ಗುರುಗಳನ್ನು ಗೌರವದಿಂದ ಕಾಣಬೇಕು. ರಾಷ್ಟ್ರದ ಸಮಗ್ರತೆ, ಏಕತೆ, ರಾಷ್ಟ್ರೀಯ ಭಾವೈಕ್ಯದ ಮಹತ್ವವನ್ನು ವಿಶ್ವಕ್ಕೆ ಸಾರಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ನಿಕಟಪೂರ್ವ ಸದಸ್ಯ ರಾಜಣ್ಣ, ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ನಾರಾಯಣ ರೆಡ್ಡಿ, ಕಾರ್ಯದರ್ಶಿ ನಾಗೇಂದ್ರ, ಹಿಂದೂ ಮಹಾಗಣಪತಿ ಸಂಚಾಲಕ ವೆಂಕಟೇಶ್, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ರಾಘವೇಂದ್ರ, ಲಾಬ್ ಪ್ರಶಾಂತ್, ಮುಖಂಡರಾದ ಮಂಜುನಾಥ್, ನವೀನ್, ಆದರ್ಶ, ಮಧು, ಕಿಶನ್, ಜಗದೀಶ್, ಬಜರಂಗದಳ ಸಂಯೋಜಕ ಚೇತನ್, ಸಹ ಸಂಯೋಜಕರಾದ ವಾಸುದೇವ್, ಧನುಷ್, ರಾಮು ಹಾಗೂ ಸೇರಿದಂತೆ ಹಿಂದೂ ಕಾರ್ಯಕರ್ತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment