Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಕಲಚೇತನರ ಕಾನೂನು ನೆರವು ಶಿಬಿರದ ಸಮಾರೋಪ: ರೋಟರಿ ಕ್ಲಬ್ ಫೋರ್ಟ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 12 : ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟ, ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಡಿಸೆಬಿಲಿಟಿ NGO ಅಲೈಯನ್ಸ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನಿನ ಅರಿವು ಮತ್ತು ನೆರವು ಶಿಬಿರದ ಸಮಾರೋಪ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

​ಈ ಮಹತ್ವದ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಫೋರ್ಟ್ ವತಿಯಿಂದ ಕ್ಲಬ್ಬಿನ ಅಧ್ಯಕ್ಷರಾದ ರೊ. ಜಗನ್ನಾಥ ಶೆಟ್ಟಿ, ಕಾರ್ಯದರ್ಶಿ ರವಿ. ಎಂ.ವಿ, ಮಾಜಿ ಅಧ್ಯಕ್ಷರಾದ ರೊ. ಮಾರುತಿ ಮೋಹನ್, ರೊ. ಶ್ರೀಕಾಂತ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿದ್ದರು.

​ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಮುರುಘಾಮಠದ ಶ್ರೀಗಳಾದ ಶ್ರೀ ಮಹಾಂತ ಲಿಂಗೇಶ್ವರ ಮಹಾಸ್ವಾಮೀಜಿಯವರು, ವಿಕಲಚೇತನರಿಗೆ ಬಸವಾದಿ ಶರಣರ ವಚನಾಧಾರಿತ ತತ್ವಗಳ ಆಧಾರದ ಮೇಲೆ ಆಶೀರ್ವಚನ ನೀಡಿದರು.

​ಅಂಗವಿಕಲರ ನೆರವಿಗಾಗಿ ನಡೆದ ಈ ಸೇವಾ ಸಮಯದಲ್ಲಿ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಫೋರ್ಟ್ ವತಿಯಿಂದ ವಿಕಲಚೇತನರಿಗಾಗಿ ವ್ಹೀಲ್ ಚೇರ್ ಅನ್ನು ಕೊಡುಗೆಯಾಗಿ ನೀಡುವ ಮೂಲಕ ಕ್ಲಬ್ಬಿನ ಸದಸ್ಯರೆಲ್ಲರೂ ಸಾರ್ಥಕ ಸಮಯವನ್ನು ಕಳೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now