ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ಮಡಿವಾಳ ಸಮಾಜದ ಬಿ.ಶಿವಲಿಂಗಪ್ಪನವರನ್ನು ಭೀಕರವಾಗಿ ಹತ್ಯೆಗೈದಿರುವುದನ್ನು ಖಂಡಿಸಿ ಜಿಲ್ಲಾ ಮಡಿವಾಳರ ಸಂಘ ಹಾಗೂ ಸಾಮಾಜಿಕ ಸಂಘರ್ಷ ಸಮಿತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಆರ್.ಶಿವಕುಮಾರ್‍ಗೆ ಮನವಿ ಸಲ್ಲಿಸಲಾಯಿತು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ರಕ್ಷಣಾಧಿಕಾರಿ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ದಾರಿಯುದ್ದಕ್ಕೂ ಹತ್ಯೆಕೋರರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಮಡಿವಾಳ ಜನಾಂಗಕ್ಕೆ ಸೇರಿದ ಬಿ.ಶಿವಲಿಂಗಪ್ಪನವರು ರಾಜಕಾರಣ ಹಾಗೂ ಉದ್ಯಮದಲ್ಲಿ ವೇಗವಾಗಿ ಬೆಳೆಯುತ್ತಿರುವುದನ್ನು ಕಂಡು ಸಹಿಸದವರಿಂದ ಹತ್ಯೆಯಾಗಿರಬಹುದೆಂಬ ಅನುಮಾನವಿದ್ದು, ತನಿಖೆ ನಡೆಸಿ ಶೀಘ್ರವೇ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಿದಾಗ ದುಃಖತಪ್ತ ಕುಟುಂಬಕ್ಕೆ ನ್ಯಾಯ ಒದಗಿಸಿದಂತಾಗುತ್ತದೆಂದು ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಜಿಲ್ಲಾ ಮಡಿವಾಳರ ಸಂಘದ ಗೌರವಾಧ್ಯಕ್ಷ ಡಾ.ವಿ.ಬಸವರಾಜ್ ಹೆಚ್ಚುವರಿ ರಕ್ಷಣಾಧಿಕಾರಿಯವರನ್ನು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಆರ್.ಶಿವಕುಮಾರ್, ಮೃತದೇಹ ಪತ್ತೆಯಾದ ಜಾಗಕ್ಕೆ ಜಿಲ್ಲಾ ರಕ್ಷಣಾಧಿಕಾರಿ, ನಾನು ಮತ್ತು ಡಿವೈಎಸ್ಪಿ. ಭೇಟಿ ನೀಡಿದೇವೆ. ಹಂತಕರ ಪತ್ತೆಗೆ ತಂಡ ರಚಿಸಿದ್ದು, ಆದಷ್ಟು ಬೇಗನೆ ಹತ್ಯೆಕೋರರನ್ನು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.
ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಬಿ.ರಾಮಜ್ಜ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುನಾಥ್, ಮಡಿವಾಳ ಸಮಾಜದ ವಿರುಪಾಕ್ಷಪ್ಪ, ಲೋಕೇಶ್ವರಪ್ಪ, ರಾಮಕೃಷ್ಣ, ಧ್ರುವಕುಮಾರ್, ಬಸವರಾಜ್, ನಾಗಣ್ಣ, ಮಂಜುನಾಥ್, ಟಿ.ರುದ್ರಮುನಿ, ರಮೇಶ್, ರಂಗಮ್ಮ, ಪ್ರಕಾಶ್ ಎಸ್‍ಜೆಎಂಐಟಿ, ರಮೇಶ್ ಜಗಳೂರು, ಮಾದಿಗರ ಸಾಂಸ್ಕøತಿಕ ಸಂಘದ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಲ್ಲಿಕಾರ್ಜುನ್, ಸಾಮಾಜಿಕ ಸಂಘರ್ಷ ಸಮಿತಿಯ ಪ್ರೊ.ಸಿ.ಕೆ.ಮಹೇಶ್, ಟಿ.ರಾಮು, ರಾಮುಗೋಸಾಯಿ, ಸಿ.ಎ.ಚಿಕ್ಕಣ್ಣ, ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















