ಸುದ್ದಿಒನ್,ಬೆಂಗಳೂರು,ಮೇ.08:ನೈಋತ್ಯ ರೈಲ್ವೆ (SWR) ಇಲಾಖೆಯ ಬಡ್ತಿ ಪರೀಕ್ಷೆಗಳನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಿಗೆ ಸೀಮಿತಗೊಳಿಸಿರುವುದನ್ನು ಯುವ ಜನತಾದಳ (ಜಾತ್ಯತೀತ) ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಆಗಸ್ಟ್ 2024ರ ರೈಲ್ವೆ ಮಂಡಳಿಯ ಆದೇಶದಂತೆ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ನೀಡಲೇಬೇಕು. ಈ ತಾರತಮ್ಯವನ್ನು ಸರಿಪಡಿಸುವಂತೆ ಕೋರಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನೈರುತ್ಯ ರೈಲ್ವೆಯ (@SWRRLY) ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ.
ಈ ವಿಷಯವಾಗಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ (@AshwiniVaishnaw) ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ.… pic.twitter.com/2GI6rgACDJ
— Nikhil Kumar (@Nikhil_Kumar_k) May 8, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












