Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾವುದೇ ಲೋಪದೋಷವಾಗದಂತೆ ಸುಗಮವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಿ : ಜಿ.ಪಂ ಸಿಇಒ ಡಾ.ಕೆ.ನಂದಿನಿದೇವಿ

Facebook
Twitter
Telegram
WhatsApp

ಚಿತ್ರದುರ್ಗ, (ಮಾರ್ಚ್.22) : ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಯು 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಹಾಗೂ ಯಾವುದೇ ಲೋಪದೋಷವಾಗದಂತೆ ಸುಗಮವಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ತಿಳಿಸಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಮಾರ್ಚ್/ಏಪ್ರಿಲ್-2022ರ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು. ವಿದ್ಯುತ್, ಡೆಸ್ಕ್ ಸೇರಿದಂತೆ ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಿ, ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗದಂತೆ ಪರೀಕ್ಷಾ ಕೇಂದ್ರದಲ್ಲಿ ಉತ್ತಮವಾದ ವಾತಾವರಣ ನಿರ್ಮಿಸಿ ಎಂದು ತಾಕೀತು ಮಾಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಓಪಿ ಅನುಸರಿಸಲು ಪ್ರತಿ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಿ ಮಕ್ಕಳ ತಪಾಸಣೆ ಮೂಲಕ ಪರೀಕ್ಷೆ ಯಶಸ್ವಿಗೊಳಿಸಲು ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕಳೆದ ವರ್ಷ ಕೋವಿಡ್-19ರ ಸಾಂಕ್ರಾಮಿಕ ರೋಗದ ನಡುವೆಯೇ ಯಾವುದೇ ಗೊಂದಲವಾಗದಂತೆ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದ್ದು,ಅದರಂತೆ ಈ ಬಾರಿಯೂ ಕಳೆದ ವರ್ಷಕ್ಕಿಂತ ಉತ್ತಮವಾಗಿ ಪರೀಕ್ಷೆಯನ್ನು ನಡೆಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಅವ್ಯವಹಾರಗಳಿಗೆ ಆಸ್ಪದವಾಗದಂತೆ ಕಟ್ಟನಿಟ್ಟಿನ ಕ್ರಮವಹಿಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪರೀಕ್ಷಾ ನೋಡಲ್ ಅಧಿಕಾರಿ ವಿಜಯಕುಮಾರ್ ಮಾತನಾಡಿ, 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 98 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇದರಲ್ಲಿ 95 ರೆಗ್ಯೂಲರ್ ಕೇಂದ್ರಗಳು ಹಾಗೂ 03 ಪರೀಕ್ಷಾ ಕೇಂದ್ರಗಳು ಖಾಸಗಿ  ಕೇಂದ್ರಗಳಾಗಿವೆ. ಬಿಇಓಗಳಿಂದ ಬಂದಂತಹ ಪ್ರಸ್ತಾವನೆಗೆ ಅನುಗುಣವಾಗಿ 98 ಕೇಂದ್ರಗಳಿಗೆ ಅಧೀಕ್ಷಕರು ಮತ್ತು ಕಸ್ಟೋಡಿಯನ್ ನೇಮಕ ಮಾಡಲಾಗಿದೆ. ಎರಡರಿಂದ ಮೂರು ಪರೀಕ್ಷಾ ಕೇಂದ್ರಗಳಿಗೆ ಒಬ್ಬ ಮಾರ್ಗಾಧಿಕಾರಿ ನೇಮಕ ಮಾಡಲಾಗಿದ್ದು, 96 ಕೇಂದ್ರಗಳಿಗೆ ಒಟ್ಟು 36 ಮಾರ್ಗಗಳನ್ನು ಗುರುತಿಸಲಾಗಿದೆ. ಪ್ರತಿ ಕೇಂದ್ರಕ್ಕೆ 2ರಂತೆ 196 ಪೊಲೀಸ್ ಅಧಿಕಾರಿಗಳನ್ನು ಹಾಗೂ 36 ಮಾರ್ಗಗಳಿಗೆ 36 ಪೊಲೀಸ್ ಅಧಿಕಾರಿಗಳನ್ನು, ಜಿಲ್ಲಾ ಕೇಂದ್ರದಲ್ಲಿ ಉತ್ತರ ಪತ್ರಿಕೆಗಳನ್ನು ಸಂಗ್ರಹಿಸಲು ಮಾಡಿದ ಸ್ಟ್ರಾಂಗ್ ರಕ್ಷಣೆಗಾಗಿ ಮಾರ್ಚ್ 28 ರಿಂದ ಉತ್ತರ ಪತ್ರಿಕೆಗಳನ್ನು ರವಾನಿಸುವವರಿಗೆ ಭದ್ರತಾ ವ್ಯವಸ್ಥೆ ಒದಗಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಿ: ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಸಿಬ್ಬಂದಿಗೆ ಪರೀಕ್ಷಾ ಮಾರ್ಗಸೂಚಿಗಳ ಕುರಿತು ತರಬೇತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ ನೀಡಿದರು.

ಯಾವಾಗ ಪ್ರಶ್ನೆ ಪತ್ರಿಕೆ ತೆರೆಯಬೇಕು, ಉತ್ತರ ಪತ್ರಿಕೆಗಳನ್ನು ಸಂಗ್ರಹಿಸುವ ವಿಧಾನ ಇತ್ಯಾದಿ ಅಂಶಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಸಿಬ್ಬಂದಿಗೆ ತರಬೇತಿ ನೀಡಬೇಕು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ, ಇದೇ 25ರಂದು ಜಿಲ್ಲೆಯ ಎಲ್ಲ ಪರೀಕ್ಷಾ ಮುಖ್ಯಸ್ಥರಿಗೆ ಸಭೆ ಕರೆಯಲಾಗಿದೆ. ಇದರಲ್ಲಿ ನೋಡಲ್ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗವಹಿಸಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಾಗಿ ಬೇಕಾಗಿರುವ ಡೆಸ್ಕ್, ಕುಡಿಯುವ ನೀರು ವ್ಯವಸ್ಥೆ, ಶೌಚಾಲಯ ಸೌಲಭ್ಯ ಸೇರಿದಂತೆ ಎಲ್ಲ ಮೂಲಸೌಕರ್ಯಗಳ ಕುರಿತು ಸಭೆಯಲ್ಲಿ ಪರಿಶೀಲನೆ ಮಾಡಲಾಗುವುದು. ಪರೀಕ್ಷಾ ಕಾರ್ಯ ಯಶಸ್ವಿಗೆ ಎಲ್ಲ ರೀತಿಯ ಕ್ರಮವಹಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಮಾತನಾಡಿ, ಪರೀಕ್ಷಾ ಕೇಂದ್ರಗಳಿಗೆ ಮುಂಚಿತವಾಗಿ ಸಂಬಂಧಪಟ್ಟವರು ಭೇಟಿ ನೀಡಿ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪರೀಕ್ಷಾ ಕಾರ್ಯಕ್ಕೆ ಸುಸ್ಥಿತಿಯಲ್ಲಿರುವ ವಾಹನಗಳ ವ್ಯವಸ್ಥೆ ಮಾಡಬೇಕು. ವಾಹನಗಳನ್ನು ಪರಿಶೀಲಿಸಿ ಆ ನಂತರ ಪರೀಕ್ಷಾ ಕಾರ್ಯಕ್ಕೆ ವಾಹನಗಳನ್ನು ನೀಡಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‍ರೆಡ್ಡಿ, ಡಯಟ್ ಪ್ರಾಂಶುಪಾಲ ಎಸ್.ಕೆ.ಬಿ.ಪ್ರಸಾದ್, ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕ ರಾಜಣ್ಣ ಸೇರಿದಂತೆ ಆರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!