ಬೆಂಗಳೂರು. ನವೆಂಬರ್.19 : ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯುಲಿರುವ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ಭಾರೀ ಕುತೂಹಲ ಮೂಡಿಸಿದೆ.
ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಯಾವ ತಂಡವೂ ಮಾಡದ ಸಾಧನೆಯನ್ನು ಭಾರತ ತಂಡ ಮಾಡಿದೆ. ಹಾಗಾಗಿ ಅಂತಿಮ ಪಂದ್ಯದಲ್ಲಿಯೂ ಕೂಡಾ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿ ಕಪ್ ಗೆಲ್ಲುವ ಮೂಲಕ ಹೊಸ ಭರವಸೆ ಮೂಡಿಸಿದ್ದಾರೆ.
ಶುಭ ಹಾರೈಸಿದ ಮುಖ್ಯಮಂತ್ರಿ : ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಮುಖ್ಯಮಂತ್ರಿಗಳು, ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.
ಗೆದ್ದು ಬಾ ಇಂಡಿಯಾ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆಲುವಿಗಾಗಿ ಕ್ರಿಕೆಟ್ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಗೆದ್ದು ಬಾ ಎಂದು ಶುಭ ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















