Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಪಚುನಾವಣೆ ಉಸ್ತುವಾರಿ ಗೊಂದಲ; ಎನ್. ರವಿಕುಮಾರ್ ಸಮರ್ಥನೆ

Facebook
Twitter
Telegram
WhatsApp

 

ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯ ಉಸ್ತುವಾರಿ ನೇಮಕ ಪಟ್ಟಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೆಸರು ಕೈಬಿಟ್ಟಿದ್ದು ಕಣ್ತಪ್ಪಿನಿಂದಾಗಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.‌ರವಿಕುಮಾರ್‌ ಹೇಳಿದರು .

ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ವಿಜಯೇಂದ್ರ ಅವರು ಉಪಚುನಾವಣೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ, ಮಸ್ಕಿ ಉಪಚುನಾವಣೆ, ಮಂಡ್ಯ ಕೆ ಆರ್ ಪೇಟೆ, ಶಿರಾದಲ್ಲೂ ಕೆಲಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಉದ್ದೇಶಪೂರ್ವಕವಾಗಿ ವಿಜಯೇಂದ್ರ ಹೆಸರು ಕೈಬಿಟ್ಟಿಲ್ಲ ಎಂದು ಸಮರ್ಥಿಸಿಕೊಂಡರು.

ಇದೇ ಸಂದರ್ಭದಲ್ಲಿ ಆರ್ ಎಸ್ ಎಸ್ ಸಂಘಟನೆಯಲ್ಲಿ  ಐಎಎಸ್, ಐಪಿಎಸ್  ಅಧಿಕಾರಿಗಳಾಗಿದ್ದಾರೆ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ‌ ನೀಡಿ, ಆರ್ ಎಸ್ಎಸ್ ಆಡಳಿತ ನಡೆಸುವ ಸಂಸ್ಥೆಯಲ್ಲ ಬದಲಾಗಿ ಸೇವೆ ಮಾಡುವ ಸಂಸ್ಥೆಯಾಗಿದೆ.ಕಾರ್ಯಕರ್ತರಿಗೆ ಸೇವಾ ಮನೋಭಾವ ಬೆಳೆಸುವ ಪ್ರಪಂಚದ ಪ್ರಮುಖ ಸಂಸ್ಥೆ ಆರ್ ಎಸ್ ಎಸ್. ಕುಮಾರಸ್ವಾಮಿ ಬಾಯಿ ಹರಕೆಯಿಂದ ಹಾಗಾದಲ್ಲಿ ನಿಜಕ್ಕೂ ಆಗ ದೇಶಕ್ಕೆ ಒಳ್ಳೆದಾಗುತ್ತದೆ ಎಂದರು.

ಆರ್ ಎಸ್ ಎಸ್ ಎಲ್ಲಿ ಇರತ್ತೋ ಅಲ್ಲಿ ಬಹಳ ಒಳ್ಳೆಯ ಕೆಲಸಗಳಾಗುತ್ತವೆ. ಕುಮಾರಸ್ವಾಮಿಯವರಿಗೆ ಡೌಟ್ ಬೇಡ, ಆರ್ ಎಸ್ ಎಸ್ ಇರುವುದರಿಂದ ದೇಶದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ.
ಕಾಶ್ಮೀರದಲ್ಲಿ ೩೭೦ ನೇ ವಿಧಿ ಹೋಯ್ತು, ಭಯೋತ್ಪಾದನೆ‌ ನಿರ್ಮೂಲನೆ ಆಯ್ತು, ೪೦೦೦ ಜನ ಅನ್ನೋದು ಬಹಳ ದೊಡ್ಡ ಸಂಖ್ಯೆ ಕುಮಾರಸ್ವಾಮಿ ಬಾಯಿ ಹರಕೆಯಿಂದ ಅಷ್ಟು ಮಂದಿ ಆರ್ ಎಸ್ ಎಸ್ ನವರು ಐಎಎಸ್, ಐಪಿಎಸ್ ಅಧಿಕಾರಿಗಳಾಗಲಿ ಎಂದರು.

ಆರ್ ಎಸ್ ಎಸ್ ಸಂಘಟನೆಯನ್ನು ತಾಲಿಬಾನಿಗಳಿಗೆ ಹೋಲಿಕೆ ಮಾಡುವ  ಸಿದ್ದರಾಮಯ್ಯ ಗೆ ತಲೆ ಕೆಟ್ಟಿದೆ.ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದ ಅವರು ಅಫ್ಘಾನಿಸ್ತಾನದಲ್ಲಿ ಆಗುವ ಹತ್ಯೆಗಳನ್ನು ಸಿದ್ದರಾಮಯ್ಯ ಒಪ್ಪಿಕೊಳ್ತಾರಾ? ಎಸ್ ಡಿ ಪಿ ಐಯನ್ನು ಒಪ್ಪಿಕೊಳ್ಳುತ್ತಾರಾ? ದೇಶದಲ್ಲಿ ತಾಲಿಬಾನಿಕರಣ ಆಗಬೇಕಾ? ಎಂದು ಸಿದ್ದರಾಮಯ್ಯ ಅವರಿಗೆ ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ನಿಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಆರ್ ಎಸ್ ಎಸ್ ಗೆ ಕಲುಹಿಸಿ ಎಂದು ಹೇಳುತ್ತೇವೆ ಎಂದು ರವಿಕುಮಾರ್ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!