ಕಲಬುರಗಿ: ದೇಶದಲ್ಲಿ ರಾಷ್ಟ್ರ ಧ್ವಜದ ಬದಲಿಗೆ ಕೇಸರಿ ಭಗವಾನ್ ಧ್ವಜ ಹಾರಿಸುತ್ತೇವೆ ಎಂದು ಸಚುವ ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಇಂದು ಕೂಡ ಕಲಬುರಗಿಯಲ್ಲಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರ ವಶವಾಗಿದ್ದಾರೆ. ಈಶ್ವರಪ್ಪ ಅವರ ಹೇಳಿಕೆಯನ್ನು ಖಂಡಿಸಿ, ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿವ ಫ್ಲ್ಯಾನ್ ಮಾಡಿಕೊಂಡಿದ್ದರು. ಆದ್ರೆ ಬಿಜೆಪಿ ಕಚೇರಿ ಮುತ್ತಿಗೆ ಹಾಕುವ ಮುನ್ನವೇ ಕೈ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆಯಲಾಗಿದೆ.
30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನ ಎಸ್ ಟಿ ಬಿ ಟಿ ಕ್ರಾಸ್ ಬಳಿ ವಶಕ್ಕೆ ಪಡೆದಿದ್ದಾರೆ. ಈಶ್ವರಪ್ಪ ಅವರ ವಿರುದ್ಧ ಘೋಷಣೆ ಕೂಗುತ್ತಾ, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ಎಚ್ಚೆತ್ತ ಪೊಲೀಸರು, ಮುತ್ತಿಗೆ ಹಾಕುವ ಮುನ್ನವೇ ವಶಕ್ಕೆ ಪಡೆದಿದ್ದಾರೆ.