Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೋಲಾರಕ್ಕೆ ಕಡೆಗೂ ಅಭ್ಯರ್ಥಿ ಘೋಷಿಸೊದ ಕಾಂಗ್ರೆಸ್ : ಅಷ್ಟಕ್ಕೂ ಟಿಕೆಟ್ ಪಡೆದ ಗೌತಮ್ ಯಾರು..?

---Advertisement---

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರ ಕಾಂಗ್ರೆಸ್ ಗೆ ಕಗ್ಗಂಟಾಗಿ ಉಳಿದಿತ್ತು. ಇದೀಗ ಕಡೆಗೂ ಕೋಲಾರ ಕ್ಷೇತ್ರದ ಟಿಕೆಟ್ ಅನೌನ್ಸ್ ಆಗಿದೆ. ಕೆ ಹೆಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ನಡುವೆ ಜಟಾಪಟಿ ಎದ್ದಿತ್ತು. ಇದೋಗ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಕೆ ವಿ ಗೌತಮ್ ಗೆ ಟಿಕೆಟ್ ನೀಡಿದ್ದಾರೆ.

ಕೋಲಾರ ಟಿಕೆಟ್ ಪಡೆದ ಗೌತಮ್, ಮೂಲತಃ ಬೆಂಗಳೂರಿನವರು. ಗೌತಮ್ ತಂದೆ ವಿಜಯ್ ಕುಮಾರ್ ಅವರು ಬೆಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಮೇಯರ್ ಆಗಿದ್ದವರು. ಗೌತಮ್ ಅವರು ಕೂಡ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದಾರೆ. ಕೆ.ವಿ ಗೌತಮ್ ಅವರು NSUI ಬೆಂಗಳೂರು ನಗರ ಕಾರ್ಯದರ್ಶಿ ಆಗಿದ್ದರು. ನಂತರ ಯೂತ್‌ ಕಾಂಗ್ರೆಸ್ ಬೆಂಗಳೂರು ಪ್ರಧಾನ ಕಾರ್ಯದರ್ಶಿಯಾಗಿದ್ದರು. ಸಚಿವ ಕೃಷ್ಣ ಭೈರೇಗೌಡರು ರಾಷ್ಟ್ರೀಯ ಯೂತ್‌ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವೇಳೆ ರಾಜ್ಯ ಯೂತ್‌ ಕಾಂಗ್ರೆಸ್ ಕಾರ್ಯದರ್ಶಿ ಯಾಗಿ ಗೌತಮ್ ಕಾರ್ಯ ನಿರ್ವಹಿಸಿದ್ದಾರೆ.

ಟಿಕೆಟ್ ನೀಡಿದ ಸಂಬಂಧ ಎಐಸಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ‘ಲೋಕಸಭಾ ಚುನಾವಣೆಗಳು – 2024 – ಕರ್ನಾಟಕ, ಕೇಂದ್ರ ಚುನಾವಣಾ ಸಮಿತಿಯು ಶ್ರೀ ಕೆ.ವಿ. ಕರ್ನಾಟಕದ 28 ಕೋಲಾರ ಎಸ್‌ಸಿ ಸಂಸದೀಯ ಕ್ಷೇತ್ರದಿಂದ ಲೋಕಸಭೆಗೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಗೌತಮ್ ಕಾಂಗ್ರೆಸ್ ಅಭ್ಯರ್ಥಿಯಾಗಿ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಮೂಲಕ ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಡೆಗೂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...