Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು: ಹೆಚ್ ಡಿ ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ ಎಂದು ಟ್ವಿಟರ್ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ʼಅಪ್ಪಟ ಸುಳ್ಳುʼ ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ. ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ಅವರು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್‌ ಅವರಿಗೆ ಹೇಳಿದ್ದರಂತೆ, ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ; ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು.

ಜನವರಿ 9ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳ ಕಾಲ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು ಎಂದು? ಅವರ ʼಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆʼ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ.

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ಹೆಚ್.ಡಿ.ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!