Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆರ್‍ಎಸ್‍ಎಸ್ ಪಥ ಸಂಚಲನ ನಿಷೇಧಿಸಲು ಕಾಂಗ್ರೆಸ್ ಕಸರತ್ತು : ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ ಆ. 30 : ಕರ್ನಾಟಕ ರಾಜ್ಯದಲ್ಲಿ ಆರ್‍ಎಸ್‍ಎಸ್ ಪಥ ಸಂಚಲನ ನಿಷೇಧಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು. ಧಾರವಾಡ ಹೈಕೋರ್ಟ್ ಪೀಠವು ಮಂಗಳವಾರ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ಇದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ ಸರ್ಕಾರಕ್ಕೆ ಹೈಕೋರ್ಟ ಛಿಮಾರಿ ಹಾಕಿದೆ ಎಂದು ಬಿಜೆಪಿ ಮುಖಂಡ ಹನುಮಂಮತೇಗೌಡ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ದೇಶಭಕ್ತ ಸಂಘಟನೆ ಆರ್‍ಎಸ್‍ಎಸ್ ಚಟುವಟಿಕೆಗಳನ್ನು ಬ್ಯಾನ್ ಮಾಡಿ ನಿಲ್ಲಿಸುವ ದೃಷ್ಟಿಯಿಂದ ಸರ್ಕಾರ ಆದೇಶ ಹೊರಡಿಸಿತ್ತು ಇದೀಗ ಧಾರವಾಡ ಹೈಕೋರ್ಟ್ ಪೀಠವು ಇವರ ಆದೇಶಕ್ಕೆ ತಡೆ ನೀಡಿದ್ದು ಇದೀಗ ಸರ್ಕಾರ ಮುಜುಗರಕ್ಕೆ ಒಳಗಾಗಿದೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೀಗ ನೂರು ವರ್ಷದ ಇತಿಹಾಸ ಹೊಂದಿರುವ ಸಂಘಟನೆ ಇದು ಭಾರತ ದೇಶಾದ್ಯಂತ ಜಿಲ್ಲೆ ಜಿಲ್ಲೆಗಳಲ್ಲಿ ಶಾಂತಯುತವಾಗಿ ಸಂಚಲನವನ್ನು ಮಾಡುತ್ತಾ ಬಂದಿರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಓಲೈಕೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ಡಿಜೆಹಳ್ಳಿ ಕೆಜೆಹಳ್ಳಿ ಮೈಸೂರು ಶಿವಮೊಗ್ಗ ಹಾಗೂ ಹುಬ್ಬಳ್ಳಿಯ ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗಳೇ ಇದಕ್ಕೆ ಸಾಕ್ಷಿ ಇಂತಹವರ ಪ್ರಕರಣಗಳನ್ನು ಹಿಂದಕ್ಕೆ ಪಡೆದು ಅವರಿಗೆ ಬೆಂಬಲಿಸುವುದು ಸರ್ಕಾರದ ಕೆಲಸವಾಗಿದೆ. ಎಂದು ಸರ್ಕಾರದ ನಿರ್ಧಾರಗಳ ವಿರುದ್ದ ಕಿಡಿ ಕಾರಿದ್ದಾರೆ.

ಮುಂದೆ ಇನ್ನಾದರೂ ರಾಜ್ಯ ಸರ್ಕಾರ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಹಚ್ಚುವುದು ಬಿಡಲಿ. ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಆರ್‍ಎಸ್‍ಎಸ್ ದೇಶಭಕ್ತ ಸಂಘಟನೆಯನ್ನು ಚಟುವಟಿಕೆಗಳನ್ನು ನಿಷೇಧಿಸಲಿಕ್ಕೆ ಹೊರಟರೆ ಪರಿಣಾಮ ಏನಾಗಬಹುದು ಎಂದು ಇನ್ನಾದರೂ ತಿಳಿದುಕೊಳ್ಳಬೇಕು ಎಂದು ಹೇಳಿ ಇಂದು ಈ ಹೈಕೋರ್ಟ್ ಪೀಠದ ತೀರ್ಪಿನಿಂದ ಸರ್ಕಾರ ಬುದ್ಧಿಯನ್ನು ಕಲಿಯಬೇಕು ಎಂದು ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now