ಬೆಂಗಳೂರು: ದೀಪಾವಳಿ ಸ್ವೀಟ್ ಬಾಕ್ಸ್ ಜೊತೆಗೆ ಸಿಎಂ ಕಚೇರಿಯಿಂದಾನೆ ಪತ್ರಕರ್ತರಿಗೆ ಲಂಚ ಹೋಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದು, ಲೋಕಾಯುಕ್ತಕ್ಕೆ ದೂರು ಸಹ ನೀಡಿದೆ. ಇದೀಗ ಈ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವಿಟ್ಟರ್ ಪ್ರತಿಕ್ರಿಯೆಗಳು ಜೋರಾಗಿದೆ.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆಶಿ ಅವರು ಐಫೋನ್ ಗಿಫ್ಟ್ ನೀಡಿದ್ದು, ಮಾಜಿ ಸಚಿವರು ಲ್ಯಾಪ್ ಟಾಪ್ ಹಂಚಿದ್ದು, ಗೋಲ್ಡ್ ಕಾಯಿನ್ ಹಂಚಿಕೆ ಮಾಡಿರುವುದು ತಮ್ಮ ಗಮನಕ್ಕೆ ಬಂದಿಲ್ಲದಿದ್ದರೆ, ಪಕ್ಷದ ರಾಜ್ಯ ಉಸ್ತುವಾರಿಯಾಗಿ, ನಿಮ್ಮ ಪಕ್ಷದಲ್ಲಿನ ಬೆಳವಣಿಗೆಯ ಬಗ್ಗೆ ಮೊದಲು ತಿಳಿದುಕೊಳ್ಳುವುದು ಒಳಿತು.#CongressLies pic.twitter.com/hhZo2N9HAo
— BJP Karnataka (@BJP4Karnataka) October 29, 2022
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಕಾಂಗ್ರೆಸ್ ಗಾಳಿಯಲ್ಲಿ ಗುಂಡು ಹೊಡೆಯುತ್ತಿದೆ. ಈ ರೀತಿಯ ಆರೋಪ ಸತ್ಯಕ್ಕೆ ದೂರವಾಗಿದೆ. ಈ ಹಿಂದೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಐಫೋನ್ ನೀಡಿರುವುದು ಕಾಂಗ್ರೆಸ್ ಮರೆತಂತಿದೆ ಎಂದು ಟ್ವೀಟ್ ಮಾಡಿದೆ.
ಪಿಎಸ್ಐ ಅಕ್ರಮ ನಡೆದಾಗ,
ಬೋರ್ ವೆಲ್ ಅಕ್ರಮ ನಡೆದಾಗ,
ಕೆಪಿಟಿಸಿಎಲ್ ನೇಮಕಾತಿ ಅಕ್ರಮ ನಡೆದಾಗ,
ಗಂಗಾ ಕಲ್ಯಾಣ ಹಗರಣ ನಡೆದಾಗ,ಕಾಂಗ್ರೆಸ್ನದ್ದು ಗಾಳಿಯಲ್ಲಿ ಗುಂಡು ಎಂದಿತ್ತು @BJP4Karnataka,
ನಂತರ ಎಲ್ಲದರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ, ಇದೂ ಬಯಲಾಗಲಿದೆ.
ಗುಂಡು ಗಾಳಿಯನ್ನೇ ಸೀಳಿಕೊಂಡು ಮುನ್ನುಗ್ಗುತ್ತದೆ ನೆನಪಿರಲಿ. https://t.co/ZAIrKTo6uv— Karnataka Congress (@INCKarnataka) October 29, 2022
ಈ ಟ್ವೀಟ್ ಅನ್ನು ಕಾಂಗ್ರೆಸ್ ರೀಟ್ವೀಟ್ ಮಾಡಿಕೊಂಡಿದ್ದು, ಪಿಎಸ್ಐ ಅಕ್ರಮ ನಡೆದಾಗ, ಬೋರ್ ವೆಲ್ ಅಕ್ರಮ ನಡೆದಾಗ, ಕೆಪಿಟಿಸಿಎಲ್ ಅಕ್ರಮ ನಡೆದಾಗ, ಗಂಗಾ ಕಲ್ಯಾಣ ಹಗರಣ ನಡೆದಾಗಲೂ ಬಿಜೆಪಿ, ಕಾಂಗ್ರೆಸ್ ನ ಗಾಳಿಯಲ್ಲಿ ಗುಂಡು ಎಂದಿತ್ತು. ಆದರೆ ನಂತರ ಎಲ್ಲದರ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ. ಇದು ಕೂಡ ಬಯಲಾಗಲಿದೆ. ಗುಂಡು ಗಾಳಿಯನ್ನು ಸೀಳಿಕೊಂಡು ಬರಲಿದೆ ಎಂದು ಉತ್ತರ ನೀಡಿದೆ.